ಕಲಬುರಗಿ,ಜು.21: ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ & ಉದ್ಯಮಶೀಲತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಜುಲೈ 23 ರಂದು ಬೆಂಗಳೂರಿನಿಂದ ವಿಮಾನದ ಮೂಲಕ ಮಧ್ಯಾಹ್ನ 2.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಗರದಲ್ಲಿಯೇ ವಾಸ್ತವ್ಯ ಮಾಡುವರು.
ಜುಲೈ 24ರಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿಯಿಂದ ಕೋರವಾರಕ್ಕೆ ತೆರಳುವ ಸಚಿವರು ಅಲ್ಲಿ ಆಯೋಜಿಸಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಅಲ್ಲಿಂದ ಸೇಡಂ ಪಟ್ಟಣಕ್ಕೆ ತೆರಳಿ ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸೇಡಂ ಘಟಕದಿಂದ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಕಲಬುರಗಿಗೆ ಬಂದು ವಾಸ್ತವ್ಯ ಮಾಡುವರು.
ಜುಲೈ 25 ಮತ್ತು 26 ರಂದು ಕಲಬುರಗಿ ಹಾಗೂ ಸೇಡಂ ತಾಲೂಕಿನ ಸ್ಥಳೀಯ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸುವರು.