ವೈದ್ಯಕೀಯ ಸೌಲಭ್ಯ ಕಲ್ಪಿಸಲು ಆಗ್ರಹ

ವಾಡಿ:ಮೇ.4: ಕಲಬುರ್ಗಿಯಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯ ಭೀತಿರಾಗಿದ್ದಾರೆ, ವೈದ್ಯಕೀಯ ಸೇವೆಯುಳ್ಳ ಸೌಲಭ್ಯ ಕಲ್ಪಿಸಲು ಸಂಸದ ಡಾ.ಉಮೇಶ ಜಾಧವ ಮುಂದಾಗಬೇಕಾಗಿದೆ ಎಂದು ಬಂಜಾರ ಸಮಾಜದ ಮುಖಂಡ ಧನಸಿಂಗ್ ವಾಚು ಪವಾರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಾಮಾರಿ ಕೊರೊನಾ ಎರಡನೇ ಅಲೆಯ ಹಟ್ಟಹಾಸ ಮೆರೆಯುತ್ತಿದ್ದು, ವೈದ್ಯಕೀಯ ಕ್ಷೇತ್ರ ಮೀತಿ ಮೀರಿ ಕೆಲಸ ಮಾಡುತ್ತಿದೆ. ಹೊರ ರೋಗಿಗಳು ವೈದ್ಯಕೀಯ ಸೇವೆ ಪಡೆದುಕೊಳ್ಳಲು ಆಸ್ಪತ್ರೆಗೆ ಬಂದರೆ, ಬೇಡ್, ವ್ಯಾಕ್ಸಿನ್ ಸೇರಿದಂತೆ ವೈದ್ಯಕೀಯ ಸೇವೆಗಳ ಕೊರತೆ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಕೀಯ ಪಕ್ಷಗಳು ಟೀಕೆ ಮಾಡುವದನ್ನು ಬಿಟು, ಇಂತಹ ಸಂದಿಗ್ಧ ಪರಸ್ಥಿತಿಯಲ್ಲಿ ಕೈ ಜೋಡಿಸಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ವೈದ್ಯಕೀಯ ಸಿಬ್ಬಂದಿಗಳ ಸಂಬಳ ನೀಡದೆ ಸರಕಾರ ನಿರ್ಲಕ್ಷ್ಯ ವಹಿಸುತ್ತಿದೆ, ಕೂಡಲೇ ಸಂಬಳ ನೀಡುವ ಮೂಲಕ ವೈದ್ಯಕೀಯ ಸೇವೆಗಳನ್ನು ಕಲ್ಪಿಸಲು ಸರಕಾರ ಮುಂದಾಗಬೇಕಾಗಿದೆ ಎಂದು ಅವರು ಒತ್ತಾಯಿಸಿದರು.