ವೈದ್ಯರ ನಡೆ ಹಳ್ಳಿಯ ಕಡೆ ಯಶಸ್ವಿ

ಬಾದಾಮಿ,ಜೂ3: ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಬುಧವಾರ ವೈದ್ಯರ ನಡೆ ಹಳ್ಳಿಯ ಕಡೆಗೆ ಎಂಬ ಕಾರ್ಯಕ್ರಮದ ನಿಮಿತ್ತ ವೈದ್ಯರು, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ವರ್ಗದವರು, ಪಿಡಿಒ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಆರೋಗ್ಯವನ್ನು ಪರೀಕ್ಷಿಸಿದರು.
60 ವರ್ಷ ಮೇಲ್ಪಟ್ಟವರ ಜ್ವರ, ಕೆಮ್ಮು, ನೆಗಡಿ ಲಕ್ಷಣ ಇರುವವರು ಮಾಹಿತಿಯನ್ನು ಸಂಗ್ರಹಿಸಲಾಯಿತು. ಆರೋಗ್ಯ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿದಾಗ ಕೋವಿಡ್ ಲಕ್ಷಣ ಕಂಡು ಬಂದರೆ ಕೂಡಲೇ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಬೇಕು. ಹಿರಿಯರು ಮತ್ತು ಚಿಕ್ಕಮಕ್ಕಳ ಬಗ್ಗೆ ಹೆಚ್ಚು ಕಾಳಜಿ ವಹಿಸಲು ತಿಳಿಸಲಾಯಿತು.
ಗ್ರಾಮದಲ್ಲಿನ ಜನರಿಗೆ ಗಂಟಲು ದ್ರವ ಪರೀಕ್ಷೆ ಮಾಡಿದರು. ಕೋವಿಡ್ ಲಸಿಕೆಯನ್ನು ಹಾಕಲಾಯಿತು. ಈ ಸಂದರ್ಭದಲ್ಲಿ ಡಾ.ಪೂರ್ಣಿಮಾ ಜೋಶಿ, ಕಂದಾಯ ನಿರೀಕ್ಷಕ ಎಸ್.ಡಿ.ದ್ಯಾಪೂರ, ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.