ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ


ದಾವಣಗೆರೆ,ಡಿ.03: ಬಾಪೂಜಿ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಮಗುವೊಂದು ಮೃತಪಟ್ಟಿರುವ ಸಂಬAಧ ಕರ್ತವ್ಯನಿರತ ವೈದ್ಯರ ಮೇಲೆ ಮೃತ ಮಗುವಿನ ಸಂಬAಧಿಕರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಾಪೂಜಿ ಆಸ್ಪತ್ರೆಯ ಹೊರ ರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಬಾಪೂಜಿ ಆಸ್ಪತ್ರೆಯ ಮಕ್ಕಳ ವಿಭಾಗದ ಓಪಿಡಿ ಸೇವೆ ಸ್ಥಗಿತಗೊಳಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದರು ಜಮಾಯಿಸಿದ ಮಕ್ಕಳ ವಿಭಾಗದ ವೈದ್ಯರು ಮತ್ತು ವೈದ್ಯಕೀಯ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾನಿರತ ವೈದ್ಯರು, ಕಳೆದ ಒಂದು ವಾರದಿಂದ ತಲೆನೋವು ಮತ್ತು ಪಿಟ್ಸ್ನಿಂದ ಬಳಲುತ್ತಿದ್ದ ಮಗುವನ್ನು ಗುರುವಾರ ಸಂಜೆ ಬಾಪೂಜಿ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ದಾಖಲಿಸಿದ್ದರು. ಆದರೆ, ವೈದ್ಯರು ನೀಡಿದ ಚಿಕತ್ಸೆಗೆ ಮಗು ಸ್ಪಂದಿಸದೆ ಮೃತ ಪಟ್ಟಿದೆ. ಆದರೆ, ಮಗುವಿನ ಸಂಬAಧಿಕರು ವಾಸ್ತವ ಪರಿಸ್ಥಿತಿಯನ್ನು ಅರಿಯದೆ ಕರ್ತವ್ಯನಿರತ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವುದಲ್ಲದೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆದ್ದರಿಂದ ತಾವೂ ಪೊಲೀಸರ ಕಡೆಯವರು ಎಂದು ಹೇಳಿಕೊಂಡು ಹಲ್ಲೆ ನಡೆಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಹಲ್ಲೆಯ ವೇಳೆ ವೈದ್ಯರ ರಕ್ಷಣೆಗೆ ಬಾರದೆ ಮೂಕ ಪ್ರೇಕ್ಷಕರಂತೆ ನಿಂತಿದ್ದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ವೈದ್ಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಮುರುಗೇಶ್, ಡಾ.ರಾಹುಲ್ ಸೇರಿದಂತೆ ಇತರರಿದ್ದರು.