ವೈದ್ಯರ ಮೇಲೆ ಕ್ರಮಕ್ಕೆ ಡಿಎಸ್‌ಎಸ್ ಒತ್ತಾಯ

ರಾಯಚೂರು.ಮೇ.೦೪-ಜಿಲ್ಲೆಯಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಒದಗಿಸುವಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ರಾಯಚೂರು ಜಿಲ್ಲೆಯಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಆಕ್ಸಿಜನ್ ಮತ್ತು ವೆಂಟಿಲೆಟರ್ ಅಭಾವದಿಂದ ಕೋವಿಡ್ ಸೋಂಕಿತ ವ್ಯಕ್ತಿಗಳು ಸಾವನ್ನಪ್ಪುತ್ತಿದ್ದಾರೆ.ಆದರೆ ಸರಕಾರವು ಯಾವದೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಮತ್ತು ವೆಂಟಿಲೆಟರ್ ಹಾಗೂ ಬೆಡ್‌ಗಳು ತೊಂದರೆ ಇರುವುದಿಲ್ಲವೆಂದು ಮಾಧ್ಯಮಗಳಲ್ಲಿ ಪತ್ರಿಕೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ರಾಯಚೂರು ಜಿಲ್ಲೆಯಲ್ಲಿ ಸರಿಯಾದ ರೀತಿಯಲ್ಲಿ ಆಕ್ಷಿಜಿನ್ ಮತ್ತು ವೆಂಟಿಲೆಟರ್ ಸಿಗದೆ ಕೋವಿಡ್ ಸೋಂಕಿತ ವ್ಯಕ್ತಿಗಳು ಆಸ್ಪತ್ರೆಯಲ್ಲಿ ದಾಖಲಾದ ಕೆಲವೆ ಗಂಟೆಗಳಲ್ಲಿ ಮರಣ ಹೊಂದುತ್ತಿದ್ದಾರೆ ಎಂದು ದೂರಿದರು.
ದಿ ೩೦-೦೪-೨೦೨೧ ರಂದು ರಾಯಚೂರು ನಗರದ ಖಾಸಗಿ ಆಸ್ಪತ್ರೆಯಾದ ಧನ್ವಂತ್ರಿ ಆಸ್ಪತ್ರೆಯಲ್ಲಿ ಶಶಿಕಾಂತ ತಂದೆ ವೇದಣ್ಣ ವ ೪೨ ಇದ್ದು ಇವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಆದರೆ ಅವರಿಗೆ ಒಂದೇ ದಿನದಲ್ಲಿ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಆಸ್ಪತ್ರೆಯವರು ನಮ್ಮಲ್ಲಿ ವೆಂಟಿಲೇಟರ್ ಕೊರತೆ ಇದೆ ನಿಮ್ಮ ರೋಗಿಯನ್ನು ಬೇರೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ನಂತರ ಇನ್ನೊಂದು ಖಾಸಗಿ ಆಸ್ಪತ್ರೆಯಾದ ನ್ಯೂ ಶಿವಂ ಆಸ್ಪತ್ರೆಗೆ ತೆಗೆದುಕೊಂಡು ಹೋದರೆ ಆಸ್ಪತ್ರೆಯವರು ಅರ್ಧ ತಾಸಿನವರೆಗೆ ಕುಳ್ಳರಿಸಿಕೊಂಡು ತದನಂತರ ನಮ್ಮ ಆಸ್ಪತ್ರೆಯಲ್ಲಿ ಯಾವುದೇ ರೀತಿ ಚಿಕಿತ್ಸೆ ಇರುವುದಿಲ್ಲ ನೀವು ಬೇರೆ ಆಸ್ಪತ್ರೆಗೆ ಹೋಗಿ ಎಂದು ಹೇಳಿದ್ದಾರೆ. ಅಲ್ಲಿಂದ ನಗರದ ಸರಕಾರಿ ಆಸ್ಪತ್ರೆಯದ ಓಪಕ್ ಆಸ್ಪತ್ರೆಗೆ ಹೋಗಿ ದಾಖಲು ಮಾಡಲು ಹೋದಾಗ ಅಲ್ಲಿನ ಸಿಬ್ಬಂದಿಗಳು ಸುಮಾರು ೧ ಗಂಟೆಯವರೆಗೆ ರೋಗಿಯನ್ನು ಅಂಬುಲೆನ್ಸ್ ನಲ್ಲಿ ಇರಿಸಿ ರೋಗಿಯನ್ನು ದಾಖಲು ಮಾಡಿಕೊಂಡಿದ್ದಾರೆ .ದಾಖಲು ಮಾಡಿಕೊಂಡು ನಂತರ ಅಲ್ಲಿ ಯಾವುದೇ ರೀತಿಯ ಆಕ್ಸಿಜನ್ ವೆಂಟಿಲೇಟರ್ ಸಿಗದೆ ರೋಗಿಯು ಮೃತಪಟ್ಟಿದ್ದಾನೆ ಎಂದು ದೂರಿದರು.
ಆದ್ದರಿಂದ ವೈದ್ಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶರಣಪ್ಪ,ಹನುಮಂತ ಅರೋಲಿ,ಚನ್ನಬಸವ ಸೇರಿದಂತೆ ಇತರರು ಇದ್ದರು.