ವೈದ್ಯಾಧಿಕಾರಿಗಳಿಗೆ ತರಬೇತಿ

ಗದಗ,ಜ20: ಎಸ್.ಬಿ.ಪಿ.ಸಿ ಕಾರ್ಯಕ್ರಮದಡಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತು ವೈದ್ಯಾಧಿಕಾರಿಗಳಿಗೆ ಒಂದು ದಿನದ ತರಬೇತಿಯನ್ನು ಗದಗ ಜಿಲ್ಲಾ ಸಮೀಕ್ಷಣಾ ಘಟಕದ ಕರುನಾಡು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ||ಎಸ್.ಎಸ್.ನೀಲಗುಂದ ಅವರು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು.
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ. ಸುನೀಲ ಹಬೀಬ ಅವರು ತರಬೇತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮ ಸಂಯೋಜಕರಾದ ಡಾ.ರವಿ ಕಡಗಾವಿ, ಜಿಲ್ಲಾ ಎಪಿಡೆಮಿಯೋಲಾಜಿಸ್ಟ್ ಡಾ.ಪ್ರವೀಣ ನಿಡಗುಂದಿ, ಮೈಕ್ರೋಬಯೋಲಾಜಿಸ್ಟ್ ಆದ ಪ್ರತೀಕ್ ಹುರಕಡ್ಲಿ ಹಾಗೂ ಜಿಲ್ಲಾ ಸಮೀಕ್ಷಣಾ ಘಟಕದ ಸಿಬ್ಬಂದಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.