ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತಿ ಅಂಗವಾಗಿಏ. 5 ರಂದು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಕಲಬುರಗಿ,ಏ.3: ನಗರದ ಲೋಹಾರ ಗಲ್ಲಿಯ ಮಹಾದೇವ ನಗರದ ಮಹಾದೇವ ಮಂದಿರದಲ್ಲಿ 2023ರ ಏಪ್ರಿಲ್ 5 ರಂದು ಮಧ್ಯಾಹ್ನ 12-35ಕ್ಕೆ ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತಿ ಅಂಗವಾಗಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಕ್ಕಮಹಾದೇವಿ ಮಹಿಳಾ ಮಂಡಳದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಡಾ. ಶರಣಬಸವಪ್ಪ ಅಪ್ಪಾ ಅವರು ವಹಿಸುರವರು.
ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಬಿ. ಪಾಟೀಲ ಗ್ರೂಪ್ಸ್‍ನ ಶ್ರೀಮತಿ ಪ್ರಿಯಂಕಾ ಚಂದು ಪಾಟೀಲ ಮಾಡುವರು. ವಿಶೇಷ ಆಹ್ವಾನಿತರಾಗಿ ಮಿಸ್ ಇಂಡಿಯಾ ಒನ್ ಇನ್ ಏ ಮಿಲಿಯನ್ ಸೌಥ 2022 ಗೋಲ್ಡ್‍ನ ಶ್ರೀಮತಿ ಪೂಜಾ ಜಿತೇಂದ್ರ ಏರಿ ಅವರು ಆಗಮಿಸವರು.
ಅಧ್ಯಕ್ಷತೆ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾದ ಶ್ರೀಮತಿ ಜಗದೇವಿ ಹಣಮಂತಪ್ಪ ಗಂಗಸಿರಿ ವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.