ವೈ.ಬೂದಿಹಾಳು ಗ್ರಾಮದಲ್ಲಿ ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನ


ಬಳ್ಳಾರಿ,ಆ.12 :ತಾಲೂಕಿನ ರೂಪನಗುಡಿ ಸಮುದಾಯ ಆರೋಗ್ಯ ಕೇಂದ್ರದಿಂದ ವೈ-ಬೂದಿಹಾಳ್ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನ ಕಾರ್ಯಕ್ರಮ ಗುರುವಾರ ಹಮ್ಮಿಕೊಳ್ಳಲಾಯಿತು.
ರೂಪನಗುಡಿಯ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಚಿತ್ರಾ ವರ್ಣೇಕರ್ ಅವರು ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಎರಡು ವಾರಕ್ಕೂ ಹೆಚ್ಚು ದಿನ ಕೆಮ್ಮು ಇರುವವರು ಹಾಗೂ ಕ್ಷಯ ರೋಗದಿದಂದ ಗುಣಮುಖರಾದವರು ಸಹ ಮತ್ತೊಮ್ಮೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೈ ಬೂದಿಹಾಳು ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಗೂ  ಎಲ್ಲಾ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.

One attachment • Scanned by Gmail