ವ್ಯಕ್ತಿ ಕಾಣೆ; ಪತ್ತೆಗೆ ಮನವಿ


ಬಳ್ಳಾರಿ,ಫೆ.13: ತೋರಣಗಲ್ಲು ಗ್ರಾಮದ ಮಲ್ಲಣ್ಣ ಅಂಗಡಿ ಎನ್ನುವ 38 ವರ್ಷದ ವ್ಯಕ್ತಿ ಫೆ.3ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ತೋರಣಗಲ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿಯವರು ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ದೃಢವಾದ ಮೈಕಟ್ಟು ಇದ್ದು, ತಲೆಯಲ್ಲಿ ಕಪ್ಪು-ಬಿಳಿ ಬಣ್ಣದ ಕೂದಲು ಹೊಂದಿದ್ದಾನೆ. ಕಾಣೆಯಾದ ಸಂಧರ್ಭದಲ್ಲಿ ಬಿಳಿ ಬಣ್ಣದ ಶರ್ಟ್ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಳ್ಳ ವ್ಯಕ್ತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ:0839525100, ಮೊ:9480803062, ಸಂಡೂರು ವೃತ್ತದ ಪಿ.ಎಸ್.ಐ ದೂ:08395260100, ಮೊ:9480803036, ತೋರಣಗಲ್ಲು ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ ಮೊ:9480803010, ಬಳ್ಳಾರಿ ಎಸ್.ಪಿ ದೂ:08392258300, ಬಳ್ಳಾರಿ ಕಂಟ್ರೋಲ್ ರೂಮ್ ದೂ:08392279100 ಗೆ ಕರೆಮಾಡಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.