ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಫೆ.೨೭; ಮಾರ್ಚ್ 01 ರಿಂದ 22 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ, ಯಾವುದೇ ಲೋಪದೋಷವಿಲ್ಲದಂತೆ ಸುಗಮವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೇಸಿಗೆ ಸಂದರ್ಭವಾಗಿರುವ ಕಾರಣ ಎಲ್ಲ ಪರೀಕ್ಷಾ ಕೊಠಡಿಗಳಲ್ಲಿ ಗಾಳಿ, ಬೆಳಕು, ಆಸನಗಳ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದು ತಿಳಿಸಿದ ಅವರು, ಯಾವುದೇ ಸಮಸ್ಯೆಯಾಗದಂತೆ ಪರೀಕ್ಷಾ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಬೇಕು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.