ವ್ಯಸನಗಳಿಂದ ಮಾನಸಿಕ ನೆಮ್ಮದಿ ಹಾಳು


ಬಾಗಲಕೋಟೆ,ಅ.18 : ಆರ್ಥಿಕವಾಗಿ, ದೈಹಿಕವಾಗಿ, ಸಾಮಾಜಿಕವಾಗಿ ಸದೃಡನಾದ ಮನುಷ್ಯ ವ್ಯಸನಿಯಾದರೆ ಮಾನಸಿಕ ನೆಮ್ಮದಿ ಕಳೆದುಕೊಳ್ಳುತ್ತಾನೆ. ಇದರ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಮಾನಸಿಕ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ.ಹೇಳಿದರು.ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ನಗರಸಭೆ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ನಗರಸಭೆ ಸಭಾಭವನದಲ್ಲಿ ಹಮ್ಮಿಕೊಂಡ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕುರಿತು ಕಾನೂನು ಅರಿವು ಹಾಗೂ ಎನ್.ಸಿ.ಡಿ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.ವ್ಯಸನಗಳು ಮೊದಲು ದೈಹಿಕವಾಗಿ ತೊಂದರೆ ಕೊಡದಿದ್ದರೂ ಮಾನಸಿಕವಾಗಿ ಹೆಚ್ಚು ಪರಿಣಾಮ ಬೀರುತ್ತವೆ. ಇದರಿಂದ ಮನುಷ್ಯ ಅಶಕ್ತನಾಗಿ ರೋಗಗ್ರಸ್ಥನಾಗುತ್ತಾನೆ ಎಂದರು. ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ವಾಸನದ ಆರ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ದಯಾನಂದ ಕರೆನ್ನವರ, ಜಿಲ್ಲಾ ಕುಷ್ಟರೋಗ ನಿವಾರಣಾ ಅಧಿಕಾರಿ ಡಾ.ಎಸ್.ಸಿ.ಪಾಟೀಲ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ ಜಿಲ್ಲಾ ಆಸ್ಪತ್ರೆಯ ಮಾನಸಿಕ ಆರೋಗ್ಯ ವೈದ್ಯ ಡಾ.ರವಿ ಸಿ.ಎ, ವಕೀಲರ ಸಂಘದ ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಹಾವರಗಿ, ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಂಯೋಜಕ ಡಾ.ಶಶಿಕಾಂತ ಕುಮಠಳ್ಳಿ ಸೇರಿದಂತೆ ಇತರರು ಉಪಸ್ಥತರಿದ್ದರು.