
ಬಾಗಲಕೋಟೆ,ಆ.3 : ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಮತ್ತು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಜಂಟಿಯಾಗಿ ಚಾಲನೆ ನೀಡಿದರು.
ನವನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಪ್ರಾರಂಭವಾದ ಜಾಗೃತಿ ಜಾಥಾ ನಗರದ ನಾನಾ ಕಡೆ ಸಂಚರಿಸಿತು. ಜಾಥಾದಲ್ಲಿ ಜಿಲ್ಲಾ ಆಸ್ಪತ್ರೆಯ ಅರೇ ವೈದ್ಯಕೀಯ ಕಾಲೇಜಿನ ಸುಮಾರು 200 ವಿಧ್ರ್ಯಾರ್ಥಿಗಳು ಹಾಗೂ ಆರ್ಯೋಗ ಇಲಾಖೆಯ ಸಿಬ್ಬಂದಿ ಧ್ವನಿ ವರ್ಧಕದ ಮೂಲಕ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಜಾಥಾದೂದ್ದಕ್ಕೂ ವ್ಯಸನಮುಕ್ತ ಸಮಾಜದಿಂದ ಸಾರ್ವಜನಿಕರ ಆರೋಗ್ಯ ಉತ್ತಮಪಡಿಸುವ ಸಲುವಾಗಿ ಅರಿವು ಮೂಡಿಸುವ ಕರ ಪತ್ರಗಳನ್ನು ವಿತರಿಸಲಾಯಿತು.
ಪ್ರಾರಂಭದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವ ದಿಸೆಯಲ್ಲಿ ವಿಧ್ಯಾರ್ಥಿಗಳಿಗೆ, ಸಿಬ್ಬಂದಿಯವರಿಗೆ ಹಾಗೂ ಸಾರ್ವಜನಿಕರಿಗೆ ಉಪ ಜಿಲ್ಲಾ ಆರ್ಯೋಗ ಶಿಕ್ಷಣಾಧಿಕಾರಿ ಕೆ.ಆರ್.ಪವಾರ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಶಿವನಗೌಡ ಪಾಟಿಲ ಸೇರಿದಂತೆ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅಧಿಕಾರಿಗಳು ಜಿಲ್ಲಾ ಆರೋಗ್ಯ ಶಿಕ್ಷಣಧಿಕಾರಿಗಳು, ವೈಧ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.