ವ್ಯಸನ ಮುಕ್ತ ದಿನಾಚರಣೆ

ಕಲಬುರಗಿ,ಆ.1-ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ನಗರದ ವಾರ್ತಾ ಭವನದಲ್ಲಿ ಇಂದು ವ್ಯಸನ ಮುಕ್ತ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರು ದಿನಾಚರಣೆ ಅಂಗವಾಗಿ ವ್ಯಸನಮುಕ್ತ ಸಮಾಜಕ್ಕೆ ಕೊಡುಗೆ ನೀಡಿದ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಿಗೆ ಮದ್ಯಪಾನ, ಮಾದಕವಸ್ತು ಹಾಗೂ ತಂಬಾಕು ಉತ್ಪನ್ನಗಳನ್ನು ತ್ಯಜಿಸುತ್ತೇನೆ ಇನ್ನೆಂದು ಇವುಗಳನ್ನು ಮುಟ್ಟುವುದಿಲ್ಲ ಎಂದು ಉಪನಿರ್ದೇಶಕರು ಪ್ರತಿಜ್ಞಾ ವಿಧಿ ಬೋಧಿಸಿದರು. ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.