ಸೊರಬ.ಜೂ.23; ವ್ಯಸನ ಮುಕ್ತ ಸಮಾಜ ಮುಕ್ತ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬ ನಾಗರಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಡೆ ಸಂಸ್ಥಾನ ಮಠದ ಡಾ ,ಮ,ನಿ,ಪ್ರ, ಮಹಾಂತ ಸ್ವಾಮೀಜಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕರ್ನಾಟಕ ಜನ ಜಾಗೃತಿ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಜಡೆ ಮಠದ ಶ್ರೀ ಸಿದ್ಧವೃಷಭೇಂದ್ರ ಸಭಾಭವನದಲ್ಲಿ 1674 ನೇ ಮದ್ಯ ವರ್ಜನ ಶಿಬಿರದ ಕಾರ್ಯಕ್ರಮ ಉದ್ಘಾಟಿಸಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು ಮದ್ಯ ವ್ಯಸನಕ್ಕೆ ಬಲಿಯಾಗಿ ಅನೇಕ ಕುಟುಂಬಗಳು ಸಂಕಷ್ಟವನ್ನು ಅನುಭವಿಸುತ್ತಿವೆ ಅಂತಹ ಕುಟುಂಬಗಳನ್ನು ಸುರಕ್ಷಿಸ ಬೇಕೇಂಬ ಮಹಾದುದ್ಧೇಶದಿಂದ ಶ್ರೀ ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಯಶಸ್ವಿಯಾಗಿ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ವ್ಯಸನ ಮುಕ್ತರಾಗಿ ಕುಟುಂಬದೊಂದಿಗೆ ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದರು. ಶಾಂತಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇವಲ ಆರ್ಥಿಕವಾಗಿ ಸಂಘ ಸಂಸ್ಥೆಗಳಿಗೆ ಸಾಲ ಸೌಲಭ್ಯ ನೀಡುವುದಷ್ಟೇ ಅಲ್ಲದೆ ಸಾಮಾಜಮುಖಿಯಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಸಮಾಜದಲ್ಲಿ ತಮ್ಮ ಮಹತ್ವವನ್ನು ಉಳಿಸಿಕೊಂಡಿದೆ ಎಂದರು.ಜಿಲ್ಲಾ ಯೋಜನಾ ನಿರ್ದೇಶಕ ಬಾಬು ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಗೌರವಧ್ಯಾಕ್ಷ ಜಿ.ಪಂ, ಮಾಜಿ ಸದಸ್ಯ ಶಿವಲಿಂಗೇಗೌಡ, ಅಧ್ಯಕ್ಷ ರಾಜುಗೌಡ, ಸುಭಾಷ್ ನಾಯ್ಕ್, ಪಿಎಸ್ಐ ರಾಜು ರೆಡ್ಡಿ, ಸುಧಾ ಶಿವಪ್ರಸಾದ್, ಕಾಳಿಂಗ ರಾಜ್,ಸುಭ್ರಾಯ್ ನಾಯಕ್,ರಾಜಪ್ಪ,ಭರಮಗೌಡ ಸೇರಿದಂತೆ ಮೊದಲಾದವರಿದ್ದರು.