
ಸಂಜೆವಾಣಿ ವಾರ್ತೆ
ದಾವಣಗೆರೆ.ಆ.2; : ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಡಾ. ಮಹಾಂತ ಶಿವಯೋಗಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜರುಗಿದ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 1 ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸುತ್ತಿದ್ದು, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆಯು ಪ್ರೇರಣೆಯಾಗಿದೆ.ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ 1975 ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾದುದು, ದುವ್ರ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಮನಃಪರಿವರ್ತಿಸಿ, ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಇವರ ನೀಡಿದ ಕೊಡುಗೆ ಅಪಾರವಾದುದು.ವ್ಯಸನ ಮುಕ್ತ ವ್ಯಕ್ತಿ, ಕುಟುಂಬ, ಸಮಾಜ, ಗ್ರಾಮಗಳ ನಿರ್ಮಾಣ ಮಾಡುವ ಜೊತೆಗೆ ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಮಾಜ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ವ್ಯಸನಿಗಳ ಮನಪರಿವರ್ತನೆ ಮಾಡುವುದುರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ಚಟಗಳಿಗೆ ಬಲಿಯಾಗದಂತೆ ಅರಿವು ಮೂಡಿಸುತ್ತಿದ್ದರು.ಜಾತಿ, ಮತ, ಪಂಗಡ, ಧರ್ಮ, ಭಾμÉ, ದೇಶವೆನ್ನದೇ 42 ವರ್ಷಗಳ ಕಾಲ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ತಮ್ಮ ಮಹಾಂತ ಜೋಳಿಗೆ ಹಿಡಿದು ಜನರಲ್ಲಿನ ದುಶ್ಚಟಗಳ ಭಿಕ್ಷೆ ಬೇಡಿದವರು ಶಿವಯೋಗಿಗಳು ಎಂದರು.