ವ್ಯಾಕ್ಸಿನ್ ಗೂ ಮೊದಲು ರಕ್ತದಾನ ಮಾಡಲು ಕರೆ

ದಾವಣಗೆರೆ.ಮೇ.೫; ವ್ಯಾಕ್ಸಿನ್ ಗಿಂತ ಮೊದಲು ರಕ್ತದಾನ ಮಾಡಿ ” ಎಂಬ ಘೋಷ ವಾಕ್ಯದೊಂದಿಗೆ ಕೋವಿಡ್ ಮಹಾಮಾರಿಯ ಈ ಸಂಕಷ್ಟದ ಸಂದರ್ಭದಲ್ಲಿ ರಕ್ತದಾನ ಮತ್ತು ಅದರ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಅಂಗವಾಗಿ  ದಾವಣಗೆರೆಯ ಚಾಣುಕ್ಯ ಪ್ರಥಮ ದರ್ಜೆ ಮಹಾವಿದ್ಯಾಲಯ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ದಾವಣಗೆರೆಯ ಬಾಪೂಜಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿಗೆ ಸ್ವಯಂ ಪ್ರೇರಣೆಯಿಂದ ಆಗಮಿಸಿ ರಕ್ತದಾನ ಮಾಡಿದರು. ಕಾಲೇಜಿನ ಪ್ರಾಂಶುಪಾಲರು, ಎನ್.ಎಸ್.ಎಸ್. ಘಟಕದ ಅಧಿಕಾರಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ಕೂಡ ರಕ್ತದಾನ ಮಾಡುವುದರ ಮೂಲಕ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳಿಗೆ ಪ್ರೇರಣೆಯಾದರು.