ವ್ಯಾಯಾಮ ಶಾಲೆ ಲೋಕಾರ್ಪಣೆ

ಬೆಂಗಳೂರು: ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಆಹಾರದ ಜೊತೆಗೆ ವ್ಯಾಯಾಮ ಅತ್ಯಗತ್ಯ. ಪ್ರತಿಯೊಬ್ಬರು ವ್ಯಾಯಾಮ ತೊಡಗಿಸಿಕೊಳ್ಳುವ ಮೂಲಕ ದೇಹದ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಶಾಸಕ,ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.
ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅಂತರಾಷ್ಟ್ರೀಯ ಮಟ್ಟದ ಉಪಕರಣಗಳ ತೆರದ ವ್ಯಾಯಾಮ ಶಾಲೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಸದೃಢ ಆರೋಗ್ಯಕ್ಕೆ ವ್ಯಾಯಾಮ ಅತ್ಯವಶ್ಯಕ ಹೀಗಾಗಿ, ಪ್ರತಿಯೊಬ್ಬರು ದಿನಕ್ಕೆ ಕನಿಷ್ಟ ಒಂದು ಗಂಟೆಯಾದರು ವ್ಯಾಯಾಮ ಮಾಡಬೇಕು ಎಂದರು.
ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಇದೇ ಮೊಟ್ಟಮೊದಲಬಾರಿಗೆ ಸಿಂಗನಾಯಕನಹಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ಅತ್ಯಾಧುನಿಕ ಸಲಕರಣೆಯುಳ್ಳ ತೆರೆದ ವ್ಯಾಯಾಮ ಶಾಲೆ ಲೋಕಾರ್ಪಣೆ ಗೊಳಿಸಲಾಗಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಕೊವಿಡ್-೧೯ ಎರಡನೆ ಅಲೆ ಆರಂಭವಾಗಿದೆ.ನಗರದಲ್ಲಿ ಸೊಂಕಿತ ಪ್ರಕರಣಗಳು ದಿನೆ ದಿನೇ ಹೆಚ್ಚುತ್ತಿವೆ. ಇದನ್ನು ನಿಯಂತ್ರಿಸಲು ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆದರ ಇದನ್ನು ಜನರು ಪಾಲಿಸಬೇಕು. ಪ್ರತಿಯೊಬ್ಬರು ಅಂತರ ಕಾಪಾಡಿಕೊಳ್ಳುವ ಮೂಲಕ ಮಾಸ್ಕ್ ಧರಿಸಬೇಕು. ಜೊತೆಗೆ ಪೋಷಕಾಂಶಯುಕ್ತವಾದ ಆಹಾರ ಸೇವಿಸಿ,ವ್ಯಾಯಾಮ ಮಾಡುವ ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಈ ಮೂಲಕ ಕೋವಿಡ್ ವೈರಸ್ ಕೊಂಡಿಯನ್ನು ಕಳಚಬೇಕು ಎಂದು ಮನವಿಮಾಡಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಂಗನಾಯಕನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ, ಸದಸ್ಯರಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಬಾಬು,ಮಲ್ಲೇಶ್ ಸೇರಿ ಇನ್ನಿತರರಿದ್ದರು.