ಶಂಕಿತ ಉಗ್ರರ ಬಂಧನ : ರಾಘು ಗಾಬರಿ

ಶಿವಮೊಗ್ಗ, ಸೆ. ೨೧: ಜಾಗತಿಕ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿರುವ ಆರೋಪದ ಮೇರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕರನ್ನು ಬಂಧಿಸಿರುವುದು ನಿಜಕ್ಕೂ ಗಾಬರಿಯ ಸಂಗತಿ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಬುಧವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಐಸಿಸ್, ಅಲ್ ಖೈದಾ ಸಂಘಟನೆಗಳ ಜೊತೆ ನಂಟು ಹೊಂದಿರುವುದು ಬೆಳಕಿಗೆ ಬಂದಿದೆ. ದೇಶದ್ರೋಹಿ ಕೆಲಸ ಮಾಡುತ್ತಿರುವ ಕೆಲ ಯುವ ಶಕ್ತಿಗಳ ಬಗ್ಗೆ ಜಾಗರೂಕರಾರಿರಬೇಕಾಗಿದೆ. ಈ ವಿಷಯದಲ್ಲಿ ಆತಂಕಗೊಳ್ಳುವ ಅಗತ್ಯವಿಲ್ಲ. ಸರ್ಕಾರ ದಿಟ್ಟ ಕ್ರಮಕೈಗೊಂಡಿದೆ ಎಂದು ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.