ಶಂಬೆಳ್ಳಿ, ಕುಲಕರ್ಣಿಗೆ ರಾಜ್ಯ ಪ್ರಶಸ್ತಿ: ಹರ್ಷ

ಬೀದರ್: ಜ.31:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕವು ಬಿ.ಜಿ ತಿಮ್ಮಪ್ಪಯ್ಯ(ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗೆ) ಪ್ರಶಸ್ತಿಗೆ ಭಾಜನರಾದ ಪ್ರಜಾವಾಣಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ಶಶಿಕಾಂತ ಶಂಬೆಳ್ಳಿ ಹಾಗೂ ತಗಡೂರು ಕಮಲಮ್ಮ ವಿರೇಶಗೌಡ ಪ್ರಶಸ್ತಿಗೆ ಸಂಯುಕ್ತ ಕರ್ನಾಟಕ ದಿನ ಪತ್ರಿಕೆಯ ಜಿಲ್ಲಾ ವರದಿಗಾರ ಗುರುರಾಜ ಕುಲಕರ್ಣಿ ಅವರನ್ನು ನೇಮಕ ಮಾಡಿದಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹರ್ಷ ವ್ಯಕ್ತಪಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಘವು ನಾಡಿನ ಮೂಕುಟಪ್ರಾಯ ಗಡಿ ಜಿಲ್ಲೆ ಬೀದರ್ ಗೆ ಈ ವರ್ಷ ಎರಡು ಪ್ರಶಸ್ತಿಗಳು ನೀಡಿ ನಮ್ಮ ಜಿಲ್ಲೆಗೆ ಮನ್ನಣೆ ನೀಡಿದಕ್ಕೆ ಜಿಲ್ಲಾ ಘಟಕವು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿಜಿ.ಸಿ ಲೋಕೇಶ ಸೇರಿದಂತೆ ರಾಜ್ಯ ಘಟಕದ ಎಲ್ಲ ಪದಾಧಿಕಾರಿಗಳಿಗೆ ಹಾಗೂ ಆಯ್ಕೆ ಸಮಿತಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಕೆ ಗಣಪತಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.