ಶಕ್ತಿ ಯೋಜನೆ ಕುರಿತು ಸ್ಪಷ್ಟೀಕರಣ

ಕಲಬುರಗಿ,ಆ 17: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಬಸ್ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿದೆ.
ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ.
ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ.