ಹುಬ್ಬಳ್ಳಿ,ಜೂ28: ಕರ್ನಾಟಕದ ಮಹಿಳೆಯರಿಗೆ ರಾಜ್ಯದಲ್ಲಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ “ಶಕ್ತಿ” ಯೋಜನೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ ಎರಡು ಕೋಟಿಯ ಗಡಿ ತಲುಪಿದ್ದು, ಪ್ರಯಾಣದ ಟಿಕೆಟ್ ಮೌಲ್ಯ 50 ಕೋಟಿ ದಾಟಿದೆ.
ಕರ್ನಾಟಕದ ಮಹಿಳೆಯರಿಗೆ ರಾಜ್ಯದಲ್ಲಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ “ಶಕ್ತಿ” ಯೋಜನೆಗೆ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಯೋಜನೆ ಜಾರಿಯಾಗಿ 16 ನೆಯ ದಿನವೂ ಸಹ ಮಹಿಳೆಯರ ಪ್ರಯಾಣದ ಉತ್ಸಾಹ ಮುಂದುವರೆದಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜೂನ್ 26 ರಂದು 14,85,663 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 3,94,56,890 ಗಳಾಗಿದೆ. ಶಕ್ತಿ ಯೋಜನೆಯ ಆರಂಭದ ದಿನ ಜೂ.11ರಿಂದ ಜೂ.26 ರವರೆಗೆ ಒಟ್ಟು 1,99,55,040 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 50,70,47,176 ಗಳಾಗಿದೆ.
ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಹೆಚ್ಚಳದ ಜೊತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲಿ ಸಹ ಏರಿಕೆಯಾಗಿದೆ ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿರುತ್ತದೆ. ಶಕ್ತಿ ಯೋಜನೆಯ ಜಾರಿಗೆ ಹಿಂದಿನ ಸೋಮವಾರ ಜೂನ್ 5 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಸುಗಳಲ್ಲಿ ಒಟ್ಟು 16,79,067 ಪ್ರಯಾಣಿಕರು ಸಂಚಾರ ಮಾಡಿದ್ದರು. ಜೂನ್ 26 ರ ಸೋಮವಾರ 14,85,663 ಮಹಿಳೆಯರು ಹಾಗೂ 11,08,905 ಪುರುಷರು ಸೇರಿದಂತೆ ಒಟ್ಟು 25,94,568 ಜನರು ಪ್ರಯಾಣ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.