ಶತಮಾನೋತ್ಸವ ಯಶಸ್ವಿ : ಸಚಿವ ಖಂಡ್ರೆ ಕೃತಜ್ಞತೆ

ಭಾಲ್ಕಿ, ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಸಮಾರಂಭದ ಯಶಸ್ವಿಗೆ ಕೈಜೋಡಿಸಿದ ಎಲ್ಲರನ್ನೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಕೃತಜ್ಞತೆ ಸಲ್ಲಿಸಿದರು.
ಡಿ.2 ರಂದು ಪಟ್ಟಣದ ಬಿಕೆಐಟಿ ಆವರಣದಲ್ಲಿ ನಡೆದ ನಮ್ಮ ತಂದೆ ಡಾ.ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಅರ್ಥಪೂರ್ಣವಾಗಿ ಜರುಗಿತು.
ರಾಜ್ಯದ ಮೂಲೆ ಮೂಲೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿ ಶತಮಾನೋತ್ಸವ ಸಮಾರಂಭಕ್ಕೆ ಸಾಕ್ಷಿಯಾಗಿ ತಂದೆ ಡಾ.ಭೀಮಣ್ಣ ಖಂಡ್ರೆ ಅವರನ್ನು ಶುಭ ಹಾರೈಸಿದ್ದಾರೆ.
ಈ ಐತಿಹಾಸಿಕ ಸಮಾರಂಭದ ಯಶಸ್ವಿಗೆ ಶ್ರಮಿಸಿದ ಜಿಲ್ಲಾಡಳಿತ, ತಾಲೂಕು ಆಡಳಿತ, ಪೆÇಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಪತ್ರಿಕಾ ಮಾಧ್ಯಮ, ಕಾರ್ಯಕರ್ತರು, ಅಭಿಮಾನಿಗಳು ಸೇರಿ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಎಲ್ಲ ಅಭಿಮಾನಿಗಳು ಸೇರಿದಂತೆ ಪರೋಕ್ಷ ಮತ್ತು ಅಪರೋಕ್ಷವಾಗಿ ಸಹಕರಿಸಿದ ಎಲ್ಲರನ್ನು ಕೃತಜ್ಞತೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.