ಶಬರಿಮಲೈ ಪ್ರವೇಶಕ್ಕೆ ಅನುಮತಿ ನೀಡಲು ಮನವಿ

ದಾವಣಗೆರೆ. ಜ.೮; ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಹಾಕಿರುವ ನಿರ್ಬಂಧ ತೆರವುಗೊಳಿಸಬೇಕೆಂದು ಒತ್ತಾಯಿಸಿ ಶ್ರೀ ರಾಮಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳಿಂದು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೊರೊನಾ ಹರಡುತ್ತದೆ ಎಂಬ ನೆಪ ಹೇಳುವ ಮೂಲಕ ಶಬರಿಮಲೈ ಅಯ್ಯಪ್ಪ ದೇವಸ್ಥಾನ ಪ್ರವೇಶಕ್ಕೆ ನಿಷೇಧ ಹೇರಿರುವುದು ಸರಿಯಲ್ಲ ಕೋಟ್ಯಾಂತರ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಇದರಿಂದ ಅನ್ಯಾಯವಾಗಲಿದೆ ದೇಶದ ಎಲ್ಲಾ ದೇವಸ್ಥಾನದ ಪುಣ್ಯ ಕ್ಷೇತ್ರಗಳು ತೆರೆದಿರುವಾಗ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಾತ್ರ ನಿರ್ಬಂಧ ಹಾಕಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.ಕೇರಳ ಸರ್ಕಾರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ನಡೆದುಕೊಳ್ಳುತ್ತಿರುವುದು ದುರಂತ.ಈ ಕೂಡಲೇ ನಿರ್ಬಂಧ ತೆರವು ಮಾಡಿ ಭಕ್ತರಿಗೆ ಸ್ವಾಮಿಯ ದರ್ಶನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಪರಶುರಾಮ ನಡುಮನಿ,ಡಿ.ಬಿ ವಿನೋದ್ ರಾಜ್,ಶ್ರೀಧರ್,ಕರಾಟೆ ರಮೇಶ್,ಸಾಗರ್,ರಾಜು ಇದ್ದರು.