ಶರಣಬಸಪ್ಪಗೌಡ ದರ್ಶನಾಪುರರು ಭಗವಂತನ ಹೆಸರಲ್ಲಿ ಪ್ರಮಾಣವಚನ

ಶಹಾಪುರ: ಮೇ.23: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಶಾಸಕರು 16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ಐದನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರು ಪ್ರಮಾಣವಚನ ಸ್ವೀಕರಿಸಿದರು. ಹಂಗಾಮಿ ಸಭಾಧ್ಯಕ್ಷ ಆರ್.ವಿ.ದೇಶಪಾಂಡೆ ಕಾಂಗ್ರೆಸ್ ಸರ್ಕಾರ ಮೊದಲ ಅಧಿವೇಶನಕ್ಕೆ ಚಾಲನೆ ನೀಡಿದರು. ಚುನಾಯಿತ ರಾಗಿ ಆಯ್ಕೆಯಾದ ಎಲ್ಲ ಶಾಸಕ ರಿಗೆ ಸ್ವಾಗತಕೋರಿ, ಪ್ರಮಾಣ ವಚನ ಸ್ವೀಕಾರಕ್ಕೆ ಅನುವು ಮಾಡಿಕೊಟ್ಟರು. ಪ್ರಮಾಣವಚನ ಸ್ವೀಕಾರ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭಾಶಯಗಳು ಕೋರಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಐದನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರು ಭಗವಂತನ ಹೆಸರಿನಲ್ಲಿ ಶಾಸಕ ಸ್ಥಾನದ ಪ್ರಮಾಣವಚನ ಸ್ವೀಕರಿಸಿದರು.