ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಲಬುರಗಿ:ಆ.30:ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯಲ್ಲಿ ‘ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್’ ರವರ ಹುಟ್ಟು ಹಬ್ಬವನ್ನು ‘ರಾಷ್ಟ್ರೀಯ ಕ್ರೀಡಾ ದಿನಾಚರಣೆಯ’ ರೂಪದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಅಂತರ-ಶಾಲಾ ಕ್ರೀಡಾಕೂಟವÀನ್ನು ಏರ್ಪಡಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಕಲಬುರಗಿ ದಕ್ಷಿಣ ತಾಲೂಕ ವಿಭಾಗದ ದೈಹಿಕ ಪರಿವೀಕ್ಷಕರಾದ ಶ್ರೀ. ರಾಜಶೇಖರ ಗೋನಾಯಕ ಆಗಮಿಸಿ, ಮಕ್ಕಳಿಗೆ ಪ್ರಶಸ್ತಿ ಪ್ರಮಾಣ ಪತ್ರ ಮತ್ತು ಪದಕಗಳನ್ನು ಕೊಟ್ಟು ಸನ್ಮಾನಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಮೇಜರ್ ಧ್ಯಾನಚಂದ್ ರವರÀ ಜೀವನ ಸಾಧನೆ ಅವರು ನಡೆದು ಬಂದ ದಾರಿಯನ್ನು ಮಕ್ಕಳಿಗೆ ವಿವರಿಸಿದರು. ಈಗಿನ ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಯಲು ಶಾಲೆಯಲ್ಲಿ ಇಂತಹ ಕಾರ್ಯಕ್ರಮಗಳು ನಡೆಯಬೇಕೆಂದರು. ಕ್ರೀಡಾದಿನವನ್ನು ಈ ರೀತಿಯಾಗಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಬಹಳ ಸಂತೋಷದಾಯಕದ ಸುದ್ದಿ ಎಂದು ಹರ್ಷವ್ಯಕ್ತ ಪಡಿಸಿದರು”

ಈ ಕಾಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿಯರಾದ ಶ್ರೀಮತಿ. ಶಾರದಾ ರಾಂಪೂರೆ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿದರು. ಪ್ರಾಚಾರ್ಯರಾದ ಎನ್.ಎಸ್. ದೇವರಕಲ್ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಕ್ರೀಡಾದಿನವನ್ನು ಹಬ್ಬದ ಸಡಗರದಂತೆ ಎಲ್ಲರೂ ಸಂಭ್ರಮಿಸಿದರು. ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಎಲ್ಲಾ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ಹಾಗೂ ಪೂಜ್ಯ ಡಾ. ಮಾತೋಶ್ರೀ ದಾಕ್ಷಾಯಣಿ ಅವ್ವಜಿ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಪೂಜ್ಯ ಚಿ. ದೊಡ್ಡಪ್ಪ ಅಪ್ಪ ಅವರು ಹರ್ಷ ವ್ಯಕ್ತಪಡಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ. ಬಸವರಾಜ ದೇಶಮುಖ ಅವರು ಕ್ರೀಡಾಪಟುಗಳಿಗೆ ಅಭಿನಂದಿಸಿದರು.