ಶರಣಬಸವ ವಿವಿಯಲ್ಲಿ ‘ಬುಡಕಟ್ಟು ಸಂಸ್ಕøತಿ’- ರಾಷ್ಟ್ರಮಟ್ಟದ ವಿಚಾರ ಸಂಕಿರಣ

ಕಲಬುರಗಿ:ಡಿ.18:ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಹಾಗೂ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವನವರ ದಿವ್ಯ ಸಾನ್ನಿಧ್ಯದಲ್ಲಿ ಕನ್ನಡ ವಿಭಾಗದ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ಹಿನ್ನಲೆಯಲ್ಲಿ ‘ಬುಡಕಟ್ಟು ಸಂಸ್ಕøತಿ’ ವಿಷಯದ ಕುರಿತು ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಡಿ.19ರಂದು ಬೆಳಿಗ್ಗೆ 10ಕ್ಕೆ ಆಯೋಜಿಸಲಾಗಿದೆ.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ಬಿ.ನಾಯಕ ವೆಬಿನಾರ್ ಉದ್ಘಾಟಿಸುವರು. ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅತಿಥಿಯಾಗಿ ಆಗಮಿಸಲಿದ್ದಾರೆ. ವಿವಿ ಕುಲಪತಿ ಡಾ. ನಿರಂಜನ್ ವ್ಹಿ. ನಿಷ್ಠಿ ಅಧ್ಯಕ್ಷತೆ ವಹಿಸಲಿದ್ದಾರೆ.

ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ ಆಶಯ ನುಡಿಗಳನ್ನಾಡಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಡಾ.ಕೆ.ಎಂ.ಮೇತ್ರಿ ‘ಕರ್ನಾಟಕದಲ್ಲಿ ಬುಡಕಟ್ಟುಗಳು’ ಎಂಬ ವಿಷಯದ ಬಗ್ಗೆ ಮೊದಲನೆಯ ಗೋಷ್ಠಿಯಲ್ಲಿ ಮಾತನಾಡುವರು.

ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕರಾದ ಡಾ. ಟಿ.ಎಂ.ಭಾಸ್ಕರ್ ‘ಸುಡುಗಾಡು ಸಿದ್ಧರ ಸಂಸ್ಕøತಿ’ ಎಂಬ ವಿಷಯದ ಬಗ್ಗೆ ಎರಡನೆಯ ಗೋಷ್ಠಿಯಲ್ಲಿ ವಿಚಾರಮಂಡಿಸಲಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಚಲುವರಾಜು ‘ಬುಡಕಟ್ಟು ಮಹಾಕಾವ್ಯಗಳು’ ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಲಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಗಂಗಾಧರ ದೈವಜ್ಞ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. ವಿವಿಯ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎಮ್.ಎಸ್. ಪಾಟೀಲ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಸುಮಂಗಲಾ ಎನ್.ರೆಡ್ಡಿ ಮತ್ತು ಡಾ. ಪ್ರಭಾವತಿ ಎಸ್.ಚಿತಕೋಟಿ ಕಾರ್ಯಕ್ರಮದ ಸಂಯೋಜಕರಾಗಿದ್ದಾರೆ.