ಶರಣಬಸವ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆ

ಕಲಬುರಗಿ:ಎ.21:ಪೂಜ್ಯ ಬಸವರಾಜಪ್ಪ ಅಪ್ಪಾಜೀಯವರು ಮಂಗಳವಾರ ದೈವಾಧೀನರಾಗಿದ್ದನ್ನು ನೆನೆದು ಶರಣಬಸವ ವಿಶ್ವವಿದ್ಯಾಲಯದ ಸಮಾವೇಶ ಸಭಾಂಗÀಣದಲ್ಲಿ ವಿಶ್ವವಿದ್ಯಾಲಯದ ವತಿಯಿಂದ ಬುಧವಾರ ಶೋಕಾಚರಣೆ ಆಚರಿಸಲಾಯಿತು.

ವಿವಿ ಸಮ ಕುಲಪತಿ ಡಾ. ವಿ.ಡಿ. ಮೈತ್ರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದರು. ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ, ಮಾತನಾಡಿ, ಅಪ್ಪಾಜಿಯವರು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದರು. ಕಷ್ಟದಲ್ಲಿದ್ದವರ ಸಹಾಯಕಾಗಿ ಸದಾ ಸಿದ್ಧರಿಗುತ್ತಿದ್ದರು. ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಈ ದು:ಖವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದಯಪಾಲಿಸಲಿ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ವಿವಿ ಡೀನ್ ಡಾ. ಬಸವರಾಜ ಮಠಪತಿ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು ಹಾಜರಿದ್ದರು. ಅಪ್ಪಾಜೀಯವರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಎಂದು ಮೌನಾಚರಣೆ ನಡೆಸಲಾಯಿತು.