ಶರಣಬಸವ ವಿಶ್ವವಿದ್ಯಾಲಯದ ಅದ್ಭುತ ಬೆಳವಣಿಗೆಯಲ್ಲಿ ಬೋಧನಾ ಸಿಬ್ಬಂದಿಯ ಕೊಡುಗೆ ಶ್ಲಾಘಿಸಿದ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ

ಕಲಬುರಗಿ,ಜು.30: ಶರಣಬಸವ ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಯ ಅವಿರತ ಕೊಡುಗೆಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯೆ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರು ಶ್ಲಾಘಿಸಿದರು. ಕಳೆದ ಆರು ವರುಷಗಳಿಂದ ಸತತವಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಕೌನ್ಸಿಲ್ (ಓಂಂಅ) ಮಾನ್ಯತೆಗಾಗಿ ಪ್ರಸ್ತಾವಿತ ವಿವರವಾದ ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಲು ಹುರುಪಿನೊಂದಿಗೆ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಶನಿವಾರ ಸಾಯಂಕಾಲ ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ ದಾಸೋಹ ಮಹಾಮನೆಯಲ್ಲಿ ಶರಣಬಸವ ವಿಶ್ವವಿದ್ಯಾಲಯದ 6ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಆಶೀರ್ವಚನ ನೀಡಿದರು. ವಿಶ್ವವಿದ್ಯಾಲಯವನ್ನು ವಿಶ್ವದ ಶ್ರೇಷ್ಠ ವಿಶ್ವವಿದ್ಯಾಲಯವನ್ನಾಗಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಾಧಿಪತಿಗಳು ಹಾಗೂ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರ ಕನಸನ್ನು ನನಸು ಮಾಡುವ ಹಾದಿಯಲ್ಲಿ ವಿಶ್ವವಿದ್ಯಾಲಯ 7ನೇ ವರ್ಷಕ್ಕೆ ಕಾಲಿಡುತ್ತಿದೆ ಎಂದರು.

“ಶರಣಬಸವ ವಿಶ್ವವಿದ್ಯಾಲಯವು ಎಲ್ಲಾ ಕ್ಷೇತ್ರಗಳಲ್ಲಿ ವೇಗದಿಂದ ಬೆಳೆಯುತ್ತಿದೆ ಮತ್ತು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ, ಇದನ್ನು ವಿಶ್ವ ದರ್ಜೆಯ ವಿಶ್ವವಿದ್ಯಾಲಯವಾಗಿ ಪರಿವರ್ತಿಸುವ ಕನಸನ್ನು ನನಸಾಗಿಸಲು ನಾವು ಬೋಧಕ ಸಿಬ್ಬಂದಿಗೆ ಎಲ್ಲಾ ಸಹಾಯವನ್ನು ನೀಡುತ್ತೇವೆ”. ಡಾ.ಅವ್ವಾಜಿ ಮಾತನಾಡಿ, ಆರು ವರ್ಷಗಳ ಅಲ್ಪಾವಧಿಯಲ್ಲಿ ವಿಶ್ವವಿದ್ಯಾಲಯವು ಸಂಪೂರ್ಣ ವೈದ್ಯಕೀಯ ವಿಜ್ಞಾನಗಳ ಸಂಕೀರ್ಣವನ್ನು ಸ್ಥಾಪಿಸುವ ಮೊದಲ ಹೆಜ್ಜೆಯಾಗಿ, ಡಿ. ಫಾರ್ಮ್ ಕೋರ್ಸ್ ಸೇರಿದಂತೆ ಒಂಬತ್ತು ಹೊಸ ಕೋರ್ಸ್‍ಗಳನ್ನು ಪ್ರಾರಂಭಿಸಲು ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯವು ವಿವಿಧ ವಿಭಾಗಗಳಲ್ಲಿ ಸುಮಾರು 6000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗಗಳನ್ನು ಒದಗಿಸಲು ಹೆಮ್ಮೆಪಡುತ್ತದೆ ಮತ್ತು ಇದುವರೆಗೆ 50 ಕ್ಕೂ ಹೆಚ್ಚು ಬೋಧಕ ಸಿಬ್ಬಂದಿ ತಮ್ಮ ಪಿಎಚ್.ಡಿ. ಪೂರ್ಣಗೊಳಿಸಿದ್ದಾರೆ. “ಕೈಗೆಟುಕುವ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದರೊಂದಿಗೆ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕøತಿ ಮತ್ತು ಪದ್ಧತಿಗಳನ್ನು ಅಳವಡಿಸುತ್ತಿದೆ ಎಂಬುದನ್ನು ತಿಳಿಸಲು ನನಗೆ ಅತೀವ ಸಂತೋಷವಾಗುತ್ತದೆ ಎಂದು ಡಾ. ಅವ್ವಾಜಿ ತಿಳಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಹಾಗೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಶ್ರೀ ಬಸವರಾಜ ದೇಶಮುಖ ಮಾತನಾಡಿ, ಎಲ್ಲಾ ಶಿಕ್ಷಣ ಸಂಸ್ಥೆಗಳ ನಿರ್ಮಾಣದಲ್ಲಿ ಪೂಜ್ಯ ಡಾ. ಅಪ್ಪಾಜಿಯವರ ಅವಿರತ ಶ್ರಮವನ್ನು ಸ್ಮರಿಸಿದರು. ಶರಣಬಸವೇಶ್ವರ ಸಂಸ್ಥಾನದ ಹಿಂದಿನ ಪೀಠಾಧಿಪತಿಗಳ ಪುಣ್ಯಕಾರ್ಯ ಎಲ್ಲಾ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೇರಣೆ ನೀಡಿ ಅಪ್ಪಾಜಿಯವರ ಕನಸಿನ ಕೂಸಾದ ಶರಣಬಸವ ವಿಶ್ವವಿದ್ಯಾಲಯಕ್ಕೆ ಬಲವಾದ ಅಡಿಪಾಯವನ್ನು ಹಾಕಿತು. 1934 ಮತ್ತು 2017 ರ ವರ್ಷವು ಸಂಸ್ಥಾನದ ಇತಿಹಾಸದಲ್ಲಿ ಬಹಳ ಮಹತ್ವದ್ದಾಗಿದೆ. 1934 ರಲ್ಲಿ ಸಂಸ್ಥಾನವು ಕಲಬುರಗಿ ನಗರದಲ್ಲಿ ಮೊದಲ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಿತು ಹಾಗೂ 1934 ರಲ್ಲಿ ಡಾ ಅಪ್ಪಾಜಿಯವರು ಜನ್ಮ ತಾಳಿದ ವರ್ಷವೂ ಆಗಿತ್ತು. ಅದೇ ರೀತಿ 2017 ರಲ್ಲಿ ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಯಿತು ಮತ್ತು ಈ ವರ್ಷ ಸಂಸ್ಥಾನದ 9 ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರು ಜನಿಸಿದರು ಎಂದು ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ವಿ ನಿಷ್ಠಿ ಮಾತನಾಡಿ, ಶೈಕ್ಷಣಿಕವಾಗಿ ಹಿಂದುಳಿದಿದ್ದ ಕಲ್ಯಾಣ ಕರ್ನಾಟಕ ಪ್ರದೇಶವನ್ನು ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರವನ್ನಾಗಿ ಪರಿವರ್ತಿಸುವಲ್ಲಿ ಡಾ.ಅಪ್ಪಾಜಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ವಿವಿಧ ಕಂಪನಿಗಳಲ್ಲಿ ಅತ್ಯುನ್ನತ ಪ್ಯಾಕೇಜುಗಳನ್ನು ಪಡೆದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮತ್ತು ಇತರ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಸ್ವಾಗತಿಸಿದರು. ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ.ಬಸವರಾಜ ಮಠಪತಿ, ಹಣಕಾಸು ಅಧಿಕಾರಿ ಪೆÇ್ರ.ಕಿರಣ ಮಾಕಾ ಸೇರಿದಂತೆ ಇತರ ಎಲ್ಲ ವಿಭಾಗಗಳ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿದ್ದರು.