ಶರಣಬಸವ ವಿಶ್ವವಿದ್ಯಾಲಯದ ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರ ಸಮಗ್ರ ಚಾಂಪಿಯನ್‍ಶಿಪ್ ಪಡೆದ ಪೂಜ್ಯ ಶರಣಬಸವಪ್ಪ ಅಪ್ಪಾಜಿ ಹೌಸ್

ಕಲಬುರಗಿ:ನ.22: ಶರಣಬಸವ ವಿಶ್ವವಿದ್ಯಾಲಯದ ದ್ವಿತೀಯ ಕ್ರೀಡಾಕೂಟದಲ್ಲಿ ಪೂಜ್ಯ ಶರಣಬಸವಪ್ಪ ಅಪ್ಪಾಜಿ ಹೌಸ್ ಪುರುಷ ಮತ್ತು ಮಹಿಳಾ ವಿಭಾಗದ ಸಮಗ್ರ ತಂಡ ಚಾಂಪಿಯನ್‍ಶಿಪ್ ಪಡೆದುಕೊಂಡಿದ್ದು, ಪೂಜ್ಯ ಶರಣಬಸವ ಹೌಸ್ ಸಮಗ್ರ ಚಾಂಪಿಯನ್‍ಷಿಪ್ ಹಾಗೂ ಪೂಜ್ಯ ಶರಣಬಸವಪ್ಪ ಅಪ್ಪಾಜಿ ಹೌಸ್ ವಿಶ್ವವಿದ್ಯಾಲಯದ ವಾರ್ಷಿಕ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ದ್ವಿತೀಯ ಸ್ಥಾನ ಗಳಿಸಿತು. .
ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎಂ.ಎಸ್.ಪಾಸೋಡಿ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ.ನಿಷ್ಠಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಕುಲಸಚಿವ(ಮೌಲ್ಯಮಾಪನ) ಡಾ.ಬಸವರಾಜ ಮಠಪತಿ, ಹಣಕಾಸು ವಿಭಾಗದ ಅಧಿಕಾರಿ ಕಿರಣ್ ಮಾಕಾ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿಜೇತರಿಗೆ, ಟ್ರೋಫಿ, ಚಿನ್ನ, ಬೆಳ್ಳಿ, ಹಾಗೂ ಕಂಚಿನ ಪದಕಗಳನ್ನು ವಿತರಿಸಿದರು.
ನವೆಂಬರ್‍ನ ತಿಂಗಳಲ್ಲಿ ಬರುವ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ, ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಮತ್ತು ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಜನ್ಮದಿನಾಚರಣೆಯ ಸವಿನೆನಪಿಗಾಗಿ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಕಳೆದ ಒಂದು ವಾರದಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದ್ದವು.
ವಾರ್ಷಿಕ ಕ್ರೀಡಾಕೂಟಗಳಲ್ಲಿ ಪೂಜ್ಯ ಶರಣಬಸವಪ್ಪ ಅಪ್ಪಾಜಿ ಹೌಸ್ 58 ಅಂಕ ಗಳಿಸಿ ಪುರುಷರ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿ ಹೌಸ್ 50 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದರು. ಪೂಜ್ಯ ದೊಡ್ಡಪ್ಪ ಅಪ್ಪಾಜಿ ಹೌಸ್ 19 ಅಂಕ ಗಳಿಸಿ ತೃತೀಯ ಸ್ಥಾನ ಪಡೆದರು. ಮಹಿಳೆಯರ ವಿಭಾಗದಲ್ಲಿ ಪೂಜ್ಯ ಶರಣಬಸವಪ್ಪ ಅಪ್ಪಾಜಿ ಹೌಸ್ 67 ಅಂಕ ಗಳಿಸಿ ಸಮಗ್ರ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡರೆ, ಮಾತೋಶ್ರೀ ಗೋದುತಾಯಿ ಅವ್ವಾಜಿ ಹೌಸ್ 52 ಅಂಕ ಗಳಿಸಿ, ಪೂಜ್ಯ ದೊಡ್ಡಪ್ಪ ಅಪ್ಪ ಹೌಸ್ 24 ಅಂಕ ಗಳಿಸಿ ತೃತೀಯ ಸ್ಥಾನ ಪಡೆದರು.
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪೂಜ್ಯ ಶರಣಬಸವ ಹೌಸ್ 26 ಅಂಕ ಪಡೆದು ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 16 ಅಂಕ ಗಳಿಸಿದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಹೌಸ್ ದ್ವಿತೀಯ ಸ್ಥಾನ ಪಡೆದರು. ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಹೌಸ್ 14 ಅಂಕ ಗಳಿಸಿ ತೃತೀಯ ಸ್ಥಾನ ಪಡೆದರು.
ಪೂಜ್ಯ ಶರಣಬಸವಪ್ಪ ಅಪ್ಪಾಜಿ ಹೌಸ್ ಅವರ ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಸಿದ್ದಲಿಂಗ ಹಾಗೂ ಮಾತೋಶ್ರೀ ಗೋದುತಾಯಿ ಅವ್ವಾಜಿ ಹೌಸ್ ಅವರ ಮಾಹಿತಿ ವಿಜ್ಞಾನ ವಿಭಾಗದ ಸೌಜನ್ಯ ಅವರು ಕ್ರೀಡಾಕೂಟದಲ್ಲಿ ಕ್ರಮವಾಗಿ 100 ಮೀಟರ್ ಓಟದಲ್ಲಿ ಜಯಗಳಿಸುವ ಮೂಲಕ ವೇಗದ ಪುರುಷ ಮತ್ತು ಮಹಿಳೆಯಾಗಿ ಹೊರಹೊಮ್ಮಿದರು.