ಶರಣಮ್ಮ.ಪಿ.ಸಜ್ಜನರವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ;ಜ.14: ತಾಲೂಕಿನ ಹೊನ್ನ ಕಿರಣಗಿ ಗ್ರಾಮದ ಹಿರಿಯ ಜಾನಪದ ಕಲಾವಿದೆ ಶರಣಮ್ಮ.ಪಿ.ಸಜ್ಜನರವರಿಗೆ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವು ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಕುಲಪತಿಗಳಾದ ಪ್ರೊ.ನಾಗೇಶ.ಬಿ.ಬೆಟ್ಟಕೋಟೆರವರು ಪ್ರಶಸ್ತಿ ಪ್ರದಾನ ಮಾಡಿದರು.
ಅತಿಥಿಗಳಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಪ್ರೊ.ಕೆ.ಲಿಂಗಪ್ಪ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರಾದ ಪ್ರೊ.ವಾಘಮೋರೆ ಶಿವಾಜಿ, ಹಾಗೂ ಪ್ರೊ.ಎಚ್.ಟಿ.ಪೋತೆ ನಿರ್ದೇಶಕರು ಪ್ರಸಾರಂಗ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ, ಪ್ರೊ.ರಾಜನಳಕರ ಲಕ್ಷ್ಮಣ ವಿತ್ತಾಧಿಕಾರಿಗಳು ಹಣಕಾಸು ವಿಭಾಗ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ, ಕುಲಸಚಿವರಾದ ಪ್ರೊ.ಬಿ.ಶರಣಪ್ಪರವರು ಇದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ವಹಿಸಿದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ನೌಕರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.