ಶರಣರ ತತ್ವ ಅಳವಡಿಸಿಕೊಳ್ಳಲು ಕರೆ


ಚನ್ನಮ್ಮನ ಕಿತ್ತೂರು,ಮಾ.25: ಪೂರ್ವಜರ, ಶರಣರ ವಚನ, ಸಂಸ್ಕೃತಿ ಮತ್ತು ಆದರ್ಶವನ್ನು ಮರೆಯುತ್ತಿರುವದು ದುರ್ದೈವ ಸಂಗತಿಯಾಗಿದೆ ಎಂದು ಬೆಳಗಾವಿ ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ಪ್ರೇಮಕ್ಕ ಅಂಗಡಿ ಕಳವಳ ವ್ಯಕ್ತಪಡಿಸಿದರು.
ರಾಜಗುರು ಸಂಸ್ಥಾನ ಕಲ್ಮಠ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತ ಇವುಗಳ ಸಂಯುಕ್ತ ಆಶ್ರಯದಲ್ಲಿ ಚಂದರಗಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ “ವೈರಾಗ್ಯ ನಿಧಿ ಅಕ್ಕಮಹಾದೇವಿ” ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಅಕ್ಕಮಹಾದೇವಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದರು. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿಯಲ್ಲಿ ಗುರುತಿಸಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ (ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಶರಣರ ತತ್ವಗಳನ್ನು ಅಳವಡಿಸಿಕೊಳ್ಳುವದರ ಮೂಲಕ ತಮ್ಮ ಜೀವನವನ್ನು ಹಸನು ಮಾಡಿಕೊಳ್ಳಬೇಕೆಂದರು.
ಗೌರವ ಸನ್ಮಾನ ಸ್ವೀಕರಿಸಿ ಶಿಕ್ಷಕ ಎಂ.ಎಸ್. ಗುರವೈನವರ ಶರಣರ ಜೀವನ ತತ್ವ ಮತ್ತು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವುಗಳು ಸಾಗಬೇಕು. ಮಕ್ಕಳಿಗೆ ಉತ್ತಮ ಜ್ಞಾನ ನೀಡುವದರ ಮೂಲಕ ಆದರ್ಶ ಶಿಕ್ಷರಾಗುವಲ್ಲಿ ಕ್ರಿಯಾಶೀಲರಾಗಬೇಕು ಎಂದರು..
ಅಧ್ಯಕ್ಷೀಯ ನುಡಿಗಳಲ್ಲಿ ವಿಶ್ರಾಂತ ಶಿಕ್ಷಕಿಯರಾದ ಶ್ರೀಮತಿ ಅನ್ನಪೂರ್ಣಾ ಹೊಸಪೇಟಿ ಶರಣೆ ಅಕ್ಕ ಮಹಾದೇವಿ ನಮ್ಮೆಲ್ಲ ಮಹಿಳೆಯರ ಸ್ವಾವಲಂಬನೆ ಮತ್ತು ಪ್ರಗತಿಗೆ ಕಾರಣೀಕರ್ತಳಾಗಿದ್ದಾರೆ ಎಂದು ಸಂತಸ ವ್ಯಕ್ತ ಪಡಿಸುತ್ತಾ ಮಹಿಳೆಯರೂ ಕೂಡ ಪ್ರತಿಯೊಂದು ಕ್ಷೇತ್ರದಲ್ಲಿ ಮುಂದೆ ಬರಬೇಕು ಎಂದರು
ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮಿಜಿ ಅರ್ಶೀವಚನ ನೀಡಿ ಮಾತನಾಡಿ ಪ್ರತಿಯೊಬ್ಬರ ಮನೆಯಲ್ಲಿ ಪೆÇೀಷಕರು ಮಕ್ಕಳಿಗೆ ಶರಣರ ವಚನಗಳ ಮೂಲಕ ಉತ್ತಮ ಶಿವಶರಣರ ಸಂಸ್ಕೃತಿಯನ್ನು ಕಲಿಸಬೇಕೆಂದರು
ಮಹಿಳೆಯರು ಅಕ್ಕ ಮಹಾದೇವಿ ಭಾವಚಿತ್ರವನ್ನು ತೊಟ್ಟಿಲಲ್ಲಿ ಹಾಕಿ ಜೋಗುಳ ಹಾಡಿ ಮುತೈದೆಯರಿಗೆ ಉಡಿ ತುಂಬಿ ಸಂಭ್ರಮಿಸಿದರು.
ಸಂಗೀತ ಶಿಕ್ಷಕ ಈಶ್ವರ ಗಡಿಬಿಡಿ ಪ್ರಾರ್ಥಿಸಿದರು. ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ರಂಜನಾ ಬುಲಬುಲೆ ಸ್ವಾಗತಿಸಿದರು. ಕಸಾಪ ಅಧ್ಯಕ್ಷ ಡಾ.ಎಸ್.ಬಿ. ದಳವಾಯಿ ಅತಿಥಿಗಳನ್ನು ಪರಿಚಯಿಸುವದರ ಜೊತೆಗೆ ಪ್ರಾಸ್ತಾವಿಕ ನುಡಿಗಳ ಮೂಲಕ ಮಾಸಿಕ ಶಿವಾನುಭವ ಕಾರ್ಯಕ್ರಮದ ಉದ್ದೇಶ ತಿಳಿಸಿದರು.
ಪ್ರಸಾದ ಸೇವೆ ಗೈದ ದ್ರಾಕ್ಷಾಯಣಿ ಮತ್ತು ಶಂಕ್ರೆಪ್ಪ ತಿಗಡಿ ಶಿಕ್ಷಕ ದಂಪತಿಗಳನ್ನು ಸತ್ಕರಿಸಲಾಯಿತು. ಕ್ಯೂರೇಟರ್ ರಾಘವೇಂದ್ರ ವಂದಿಸಿದರು. ಪ್ರಭಾವತಿ ಲದ್ದಿಮಠ ನಿರೂಪಿಸಿದರು.
ಈ ವೇಳೆ ಶರಣ ಶರಣೆಯರು ಉಪಸ್ಥಿತರಿದ್ದರು ರಾಣಿ ಚನ್ನಮ್ಮ ಮಹಿಳಾ ವೇದಿಕೆ ಮತ್ತು ಬೆಳ್ಳಿ ಚುಕ್ಕಿ ರಾಣಿ ಚನ್ನಮ್ಮ ಮಹಿಳಾ ಮಂಡಳದ ಸದಸ್ಯರಿಂದ ಸಂಗೀತ ಕಾರ್ಯಕ್ರಮಗಳು ಜರುಗಿದವು.