ಶರಣರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಬಸವನಗೌಡ ದದ್ದಲ್

ಜಿಲ್ಲಾಡಳಿತದಿಂದ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ರಾಯಚೂರು,ಜ.೨೨- ಶರಣರ ತತ್ವಸಿದ್ದಾಂತಗಳನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಹಾಗೂ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ ಜೀವನಕ್ಕೆ ಸಾರ್ಥಕತೆ ಲಭ್ಯವಾಗುತ್ತದೆ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಅವರು ಜ.೨೧ರ(ಶನಿವಾರ) ನಗರದ ಮಹಿಳಾ ಸಮಾಜ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಅಂಬಿಗರ ಚೌಡಯ್ಯನವರು ಕೇವಲ ಒಂದು ಸಮಾಜಕ್ಕೆ ಮಾತ್ರ ಸೀಮಿತವಲ್ಲ, ಇಡೀ ಮನುಕುಲಕ್ಕೆ ದಾರಿ ದೀಪವಾಗಿದ್ದವರು. ತಮ್ಮ ವಚನಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರಾಗಿದ್ದರು.
ಗಂಗಾಮತಸ್ಥರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಿದಾಗ ಮಾತ್ರ ಮಕ್ಕಳು ಮುಮದಿನ ದಿನಗಳಲ್ಲಿ ತಲೆ ಎತ್ತುವಂತಾಗುತ್ತದೆ. ಜೊತೆಗೆ ಸಮಾಜವು ಅಭಿವೃದ್ಧಿ ಹೊಂದುತ್ತದೆ ಆದ್ದರಿಂದ ಸಮಾಜದಲ್ಲಿ ಶಿಕ್ಷಣ ಅತ್ಯಂತ ಮುಖ್ಯವಾದದ್ದು ಎಂದು ತಿಳಿಸಿದರು.
ನಗರ ಶಾಸಕ ಶಿವರಾಜ ಪಾಟೀಲ್ ಮಾತನಾಡಿ, ಅಂಬಿಗರ ಚೌಡಯ್ಯನವರು ಗಂಗಾಮತಸ್ಥ ಸಮಾಜದವರು ಮಾತ್ರವಲ್ಲದೆ ಪ್ರತಿಯೊಬ್ಬರು ಅವರ ಆರ್ದಶಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು, ಜಯಂತಿಗೆ ಸೀಮಿತವಾಗಬಾರದು, ಸಮಾಜಕ್ಕೆ ೩೦ ಗುಂಟೆ ಜಾಗ ನೀಡಿ ಗಂಗಾಮತಸ್ಥ ಭವನ ನಿರ್ಮಾಣ ಮಾಡಲಾಗುತ್ತದೆ.
೧೦ಲಕ್ಷ ರೂ ವೆಚ್ಚದಲಲಿ ನಿರ್ಮಾನ ಮಾಡಲಾಗುತ್ತದೆ. ಸುಸಜ್ಜಿತ ಭವನ ನಿರ್ಮಿಸಿಕೊಡಲಾಗುತ್ತದೆ ಎಂದರು. ನಗರದಲ್ಲಿ ಅಂಬಿಗರ ವೃತ್ತದಲ್ಲಿ ೨೫ ಲಕ್ಷರೂ. ವೆಚ್ಚದಲಲಿ ಸೌಂದರ್ಯೀಕರಣ ಮಾಡಿ ಅಭಿವೃದ್ದಿಗೊಳಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಎಸ್.ಸಿ.ಎಂ.ಪದವಿ ಮಹಾವಿದ್ಯಾಲಯ ದೇವಸಗೂರು ಪ್ರಾಂಶುಪಾಲರು ಉಮಾಮಹೇಶ್ವರಿ, ಸಮಾಜದ ಮುಖಂಡರಾದ ಕೆ.ಶಾಂತಪ್ಪ, ಕೆ.ಶರಣಪ್ಪ, ಜಿಂದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.