
ಕಲಬುರಗಿ,ಮಾ.27: ಸೋಮವಾರ ಕಲಬುರಗಿ ನಗರದ ಹೊರವಲಯದ ಶರಣಸಿರಸಗಿ ಗ್ರಾಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಸೂಪರ್ ಸ್ಪೆμÁಲಿಟಿ ಆಸ್ಪತ್ರೆಯೊಂದಿಗೆ ಪ್ರಸ್ತಾವಿತ ವೈದ್ಯಕೀಯ ಕಾಲೇಜು ಸೇರಿದಂತೆ ಉದ್ದೇಶಿತ ಆರೋಗ್ಯ ವಿಜ್ಞಾನ ಸಂಬಂಧಿತ ಕಾಲೇಜುಗಳ ನಿರ್ಮಾಣ ಕಾಮಗಾರಿಗೆ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ, ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ವಿಸ್ತಾರವಾದ 61 ಎಕರೆ ಪ್ರದೇಶದಲ್ಲಿ, ವೇದ ಘೋಷಗಳ ಮಧ್ಯೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಡಾ.ಅಪ್ಪಾಜಿ, ಪ್ರಸ್ತಾವಿತ ಆಯುರ್ವೇದಿಕ್ ಕಾಲೇಜು, ಫಾರ್ಮಸಿ ಮತ್ತು ನಸಿರ್ಂಗ್ ಕಾಲೇಜು ಸೇರಿದಂತೆ ಪ್ಯಾರಾ ಮೆಡಿಕಲ್ ಕಾಲೇಜುಗಳ ನಿರ್ಮಾಣ ಕಾರ್ಯ ತಕ್ಷಣವೇ ಪ್ರಾರಂಭಿಸಲಾಗುವುದು ಮತ್ತು ನಂತರದ ಹಂತದಲ್ಲಿ ಸೂಪರ್ ಸ್ಪೆμÁಲಿಟಿ ಆಸ್ಪತ್ರೆಯೊಂದಿಗೆ ಉದ್ದೇಶಿತ ವೈದ್ಯಕೀಯ ಕಾಲೇಜು ನಿರ್ಮಾಣವನ್ನು ಹಂತಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯೆ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಮಾತನಾಡಿ, ಉದ್ದೇಶಿತ ಕಾಲೇಜುಗಳ ನಿರ್ಮಾಣ ಕಾಮಗಾರಿಯನ್ನು ಪೂಜ್ಯ ಡಾ. ಅಪ್ಪಾಜಿ ಹಾಗೂ ಶ್ರೀ ಶರಣಬಸವೇಶ್ವರರ ಆಶೀರ್ವಾದದಿಂದ ಶರಣಶಿರಸಗಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಎಲ್ಲ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು.
ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ ನಿಷ್ಠಿ ಮಾತನಾಡಿ, ಆಸ್ಪತ್ರೆಯ ಸೌಲಭ್ಯಗಳು ಮತ್ತು ಇತರ ಪ್ಯಾರಾ ಮೆಡಿಕಲ್ ಕಾಲೇಜುಗಳು ಹಾಗೂ ಉದ್ದೇಶಿತ ಆಯುರ್ವೇದ ಕಾಲೇಜು ನಿರ್ಮಾಣ ಕಾಮಗಾರಿಯ ಆರಂಭವು ಪೂರ್ಣ ಪ್ರಮಾಣದ ವೈದ್ಯಕೀಯ ಕಾಲೇಜು ಸ್ಥಾಪಿಸುವ ವಿಶ್ವವಿದ್ಯಾಲಯದ ಅಂತಿಮ ಗುರಿಗೆ ನಾಂದಿಯಾಗಿದೆ. ಸೂಪರ್ ಸ್ಪೆμÁಲಿಟಿ ಆಸ್ಪತ್ರೆಯೊಂದಿಗೆ ಇದು ಈ ಪ್ರದೇಶದ ಜನರ ಆರೋಗ್ಯದ ಅಗತ್ಯತೆಗಳನ್ನು ಪೂರೈಸುವಲ್ಲಿ ಪ್ರಯೋಜನಕಾರಿಯಾಗುತ್ತದೆ ಎಂದು ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲ ಕುಮಾರ ಬಿಡವೆ ಮಾತನಾಡಿ, ಲಭ್ಯವಿರುವ ಜಾಗದಲ್ಲಿ ಸುಮಾರು 35 ಎಕರೆ ಭೂಮಿಯನ್ನು ಆಸ್ಪತ್ರೆ ಸೇರಿದಂತೆ ಇತರ ಪ್ಯಾರಾ ಮೆಡಿಕಲ್ ಕಾಲೇಜುಗಳು ಮತ್ತು ಪೂರ್ಣ ಪ್ರಮಾಣದ ವೈದ್ಯಕೀಯ ಕಾಲೇಜು ಹಾಗೂ ಸೂಪರ್ ಸ್ಪೆμÁಲಿಟಿ ಆಸ್ಪತ್ರೆಯೊಂದಿಗೆ ಆಯುರ್ವೇದ ಕಾಲೇಜು ನಿರ್ಮಾಣಕ್ಕೆ ಬಳಸಲಾಗುವುದು. ವಿದ್ಯಾರ್ಥಿಗಳಿಗೆ ಅಗತ್ಯವಿರುವಷ್ಟು ಹಾಸ್ಟೆಲ್ ಸೌಲಭ್ಯಗಳು, ಸಿಬ್ಬಂದಿಗಳಿಗೆ ಕ್ವಾರ್ಟರ್ಸ್, ಪೂರ್ಣ ಪ್ರಮಾಣದ ಅತಿಥಿ ಗೃಹ, ಕ್ರೀಡಾಂಗಣ ಮತ್ತು ಇತರ ಸೌಲಭ್ಯಗಳನ್ನು ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಉಳಿದಿರುವ ಜಾಗಗಳಲ್ಲಿ ವಿಶ್ವವಿದ್ಯಾಲಯದ ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಕಟ್ಟಡಗಳನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಶರಣಬಸವ ವಿಶ್ವವಿದ್ಯಾಲಯದ ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ.ಬಸವರಾಜ ಮಠಪತಿ ಸೇರಿದಂತೆ ಇತರ ಪ್ರಮುಖರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.