ಶರಣು ಮೋದಿಗೆ ನಿಗಮ ಮಂಡಳಿ ನೀಡಲು ಸಚಿವ ಈಶ್ವರ ಖಂಡ್ರೆಗೆ ಮನವಿ

ಕಲಬುರಗಿ: ಜು.11:ಮಾಜಿ ಮಹಾಪೌರರು ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶರಣು ಮೋದಿ ಅವರಿಗೆ ರಾಜ್ಯದ ಯಾವುದಾದರೂ ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ(ಕೆರಿಬೋಸಗಾ) ನೇತೃತ್ವದಲ್ಲಿ ಸಚಿವ ಈಶ್ವರ ಖಂಡ್ರೆಗೆ ಮನವಿ ಸಲ್ಲಿಸಿದರು.
ಈ ಕುರಿತು ಇತ್ತೀಚೆಗೆ ನಗರಕ್ಕೆ ಆಗಮಿಸಿದ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಶರಣಕುಮಾರ ಮೋದಿಯವರು ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿ ಹಾಗೂ ಪಕ್ಷದ ನಿಷ್ಠಾವಂತ ನಾಯಕನಾಗಿ ಹಲವಾರು ರೀತಿಯ ಪಕ್ಷಕ್ಕಾಗಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.ಮತ್ತು ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ್ದಾರೆ. ವಿಶೇಷವಾಗಿ ದಕ್ಷಿಣ ಮತಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗಾಗಿ ತುಂಬಾ ಶ್ರಮಿಸಿದಲ್ಲದೆ ಸಾರ್ವಜನಿಕರಿಂದ ಮೆಚ್ಚುಗೆ ಹಲವಾರು ಯುವ ಅಭಿಮಾನಿಗಳನ್ನು ಹೊಂದಿದ್ದಾರೆ ಎಂದರು.
ಸದರಿಯವರು ಕೂಡಾ ವಿಧಾನಸಭಾ ಕ್ಷೇತ್ರದ ಪ್ರಬಲ ಅಕಾಂಕ್ಷಿಯಾಗಿ ಕೊನೆ ಘಳಿಗೆಯಲ್ಲಿ ಟಿಕೆಟ್ ದೊರೆಯದೆ ಇದ್ದರೂ ಕೂಡಾ ಎದೆಗುಂದದೆ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮ ಘನ ಸೇವೆಯನ್ನು ಶ್ರದ್ಧೆಯಿಂದ ನಿರ್ವಹಿಸಿದ್ದಾರೆ.ಅವರು ಮಹಾನಗರ ಪಾಲಿಕೆಯ ಮಹಾಪೌರರಾದ ನಂತರ ಪಕ್ಷದಲ್ಲಿ ಯಾವುದೇ ಉನ್ನತ ಸ್ಥಾನವನ್ನು ತೆಗೆದುಕೊಂಡಿರುವುದಿಲ್ಲ.ಆದ್ದರಿಂದ ಕೂಡಲೇ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಶರಣಕುಮಾರ ಮೋದಿಯವರಿಗೆ ರಾಜ್ಯದ ಯಾವುದಾದರೂ ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಅವರು ಸಚಿವ ಈಶ್ವರ ಖಂಡ್ರೆಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ನಿಸ್ಸಾರ ಅಹ್ಮದ ಖಾನ,ಕಲ್ಯಾಣಿ ತಳವಾರ,ಅನೀಲ ಪಟ್ಟಣಕರ,ಶಶಿಕುಮಾರ ವಠಾರ,ರಾಜು ಹೊಸಮನಿ,ಸುನೀಲ,ಸೈಯದ ಪಟೇಲ ಮುಡ್ಡಿ,ಗೌತಮ ಜಂಬಗಿ,ಹಾಗೂ ಜಿಡಗ ಜಿಪಂ ಮಾಜಿ ಸದಸ್ಯ ಸಿದ್ದರಾಮ ಪ್ಯಾಟಿ ಸೇರಿದಂತೆ ಇತರರು ಇದ್ದರು.