ಶರಣ ಸಾಹಿತ್ಯ ಪರಿಷತ್ತಿನಿಂದ ಹಡಪದ ಅಪ್ಪಣ ಜಯಂತಿ ಆಚರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಜು.೧೫: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ದಾವಣಗೆರೆ ನಗರ ಘಟಕ ಹಾಗೂ ತಾಲ್ಲೂಕು ಕಸಾಪ ಸಹಯೋಗದಲ್ಲಿ ಬಸಾಪುರ ಆರಾಧ್ಯ ಬಡಾವಣೆಯ ಶ್ರೀ ರೇವಣಸಿದ್ದೇಶ್ವರ ಪ್ರೌಢಶಾಲೆಯ ಶ್ರೀಮತಿ ನಾಗಮ್ಮ ಸಭಾಂಗಣದಲ್ಲಿ ಗುರುವಾರದಂದು ದತ್ತಿ ಕಾರ್ಯಕ್ರಮ ಮತ್ತು ನಿಜಸುಖಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್. ನಾಗರಾಜಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಪರಮೇಶ್ವರಪ್ಪ ಎಂ. ಸಿರಿಗೆರೆ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆಹಾರ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಬಿ.ಟಿ. ಪಪ್ರಕಾಶ್ ಅನುಭಾವ ನೀಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎ. ಅರುಣ್ ಕುಮಾರ್ ಅವರನ್ನು ಸನ್ಮಾನಿಸಿದರು.ಮುಖ್ಯ ಅತಿಥಿಗಳಾಗಿ ಬಾ.ಮ. ಬಸವರಾಜಯ್ಯ, ಶಶಿಧರ ಬಸಾಪುರ, ಗಾಯತ್ರಿ ವಸ್ತçದ್, ಕೆ.ಜಿ. ಸೌಭಾಗ್ಯಮ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದತ್ತಿ ದಾನಿಗಳಾದ ಷಾ ಅಂಬಾಲಾಲ್ ಜೈನ್ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಬಿ. ಪರಮೇಶ್ವರಪ್ಪ ಮತ್ತು ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ವಿನೋದಾ ಅಜಗಣ್ಣನವರು ಉಪಸ್ಥಿತರಿದ್ದರು.ಕಾರ್ಯದರ್ಶಿ ಬಿ.ಜಿ. ಲೀಲಾವತಿ ಶೇಖರಪ್ಪ ಸ್ವಾಗತಿಸಿದರು. ಖಜಾಂಚಿ ಪಿ. ಶೈಲಜಾ ಪಾಲಾಕ್ಷಪ್ಪ ವಂದಿಸಿದರು. ಕಾರ್ಯದರ್ಶಿ ಭರಮಪ್ಪ ಮೈಸೂರು ನಿರೂಪಿಸಿದರು.