ಶರತ್ ಬಾಬು ನಿಧನರಾಗಿಲ್ಲ: ಚೇತರಿಸಿಕೊಳ್ಳುತ್ತಿದ್ದಾರೆ: ಕುಟುಂಬದ ಸ್ಪಷ್ಟನೆ

ಹೈದರಾಬಾದ್, ಮೇ.3- ಕನ್ನಡ ಸೇರಿದಂತೆ ಹಲವು ಭಾಷೆಯಲ್ಲಿ ನಟಿಸಿದ್ದ ಬಹುಭಾಷಾ ನಟ ಶರತ್ ಬಾಬು ನಿಧನರಾಗಿಲ್ಲ ಬದುಕಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಸಹೋದರಿ ಶರತ್ ಬಾಬು ನಿಧನರಾಗಿಲ್ಲ. ಚೇತರಿಸಿಕೊಳ್ಳುತ್ತಿದ್ದಾರೆ . ಸಾಮಾಜಿಕ ಮಾದ್ಯಮಗಳಲ್ಲಿ ಬರುತ್ತಿರುವ ವರದಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಸಾಮಾಜಿಕ ಮಾದ್ಯಮದಲ್ಲಿ ಶರತ್ ಬಾಬು ನಿಧನರಾಗಿದ್ದಾರೆ ಎನ್ನುವ ಸುದ್ದಿ ಬರುತ್ತಿದೆ. ಇದು ಸರಿಯಲ್ಲ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಾಬು ಅವರು ಸಂಪೂರ್ಣವಾಗಿ ಗುಣಮುಖರಾದ ಬಳಿಕ ಅವರೇ ಮಾದ್ಯಮದೊಂದಿಗೆ ಮಾತನಾಡುತ್ತಾರೆ.ಯಾಕೆ ಸುಳ್ಳು ಸುಬ್ಬಿ ಹಬ್ಬಿಸುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.

ಬೆಂಗಳೂರು ಮತ್ತು ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ 71 ಶರತ್ ಬಾಬು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಗುಣಮುಖರಾಗುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ನಂಬಬೇಡಿ ಎಂದು ಅವರ ಸಹೋದರಿ ಮನವಿ ಮಾಡಿದ್ದಾರೆ‌.