ಶರವೇಗದಲ್ಲಿ ಸೋಂಕು ಏರಿಕೆ 312 ಮಂದಿ ಸಾವು

ನವದೆಹಲಿ, ಮಾ.೨೮- ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ನಾಗಾಲೋಟದಲ್ಲಿ ಸಾಗುತ್ತಿದ್ದು ದಿನದಿಂದ ದಿನಕ್ಕೆ ಸೋಂಕು ಪ್ರಮಾಣ ಶರವೇಗದಲ್ಲಿ ಹೆಚ್ಚಾಗುತ್ತಿದೆ.
೧೬೩ ದಿನಗಳ ಬಳಿಕ ದೇಶದಲ್ಲಿ ಕೋರೊನೊ ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ದಾಖಲೆ ಬರೆದಿದೆ. ಕಳೆದ ೨೪ ಗಂಟೆಗಳಲ್ಲಿ ೬೨,೭೧೪ ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ೩೧೨ ಮಂದಿ ಮೃತಪಟ್ಟಿದ್ದಾರೆ.
ಸೋಂಕು ಪ್ರಮಾಣ ಹೆಚ್ಚಾಗುತ್ತಿರುವುದು ಸಹಜವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಸಿಲುಕುವಂತೆ ಮಾಡಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಸೋಂಕು ಹೆಚ್ಚಳ ಸೋಂಕು ನಿಗ್ರಹದ್ದೇ ದೊಡ್ಡ ಸಮಸ್ಯೆಯಾಗಿದೆ.
ಇಂದು ಬೆಳಗ್ಗೆ ೮ ಗಂಟೆಯ ತನಕ ದೇಶದಲ್ಲಿ ೬೨,೭೧೪ ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು ೩೧೨ ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.೨೮,೭೩೯ ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ
ದೇಶದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯವರೆಗೆ ೧,೧೯,೭೧,೬೨೪ ಮಂದಿಗೆ ಏರಿಕೆಯಾಗಿದೆ. ೧,೧೩,೨೩೭೬೨ ಮಂದಿ ಗುಣಮುಖರಾಗಿದ್ದಾರೆ.೧,೬೧,೫೫೨ ಮಂದಿ ಸಾವನ್ನಪ್ಪಿದ್ದಾರೆ.

ಸಕ್ರಿಯ ಪ್ರಕರಣ ಏರಿಕೆ:

ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ತಿಳಿಸಿದೆ.
ಸದ್ಯ ದೇಶದಲ್ಲಿ ೪,೮೬,೩೧೦ ಮಂದಿಗೆ ಸಕ್ರಿಯ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಮಹಾರಾಷ್ಟ್ರ-ಕರ್ನಾಟಕ ಪಂಜಾಬ್ ,ಹರಿಯಾಣ ರಾಜಸ್ಥಾನ ಕೇರಳ ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಂದು ಸೋಂಕು ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿರುವುದು ಸದ್ಯ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿದೆ.
ಫೆಬ್ರವರಿ ತಿಂಗಳ ಮಧ್ಯಭಾಗದವರೆಗೆ ೧,೩೫,೦೦೦ ಸಕ್ರಿಯ ಪ್ರಕರಣಗಳಿಂದ ದೇಶದಲ್ಲಿ ಮಾರ್ಚ್ ಅಂತ್ಯದ ವೇಳೆಗೆ ಸರಿಸುಮಾರು ೫ ಲಕ್ಷ ಮಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ

ಬಾಕ್ಸ್
೬ ಕೋಟಿಗೆ ಲಸಿಕೆ

ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ನಡುವೆ ಅದರ ತಡೆಗೆ ಲಸಿಕೆ ಹಾಕುವ ಕಾರ್ಯ ಭರದಿಂದ ಸಾಗಿದೆ
ದೇಶದಲ್ಲಿ ಇದುವರೆಗೆ ೬,೦೨,೬೯,೭೮೨ ಮಂದಿಗೆ ಲಸಿಕೆ ಹಾಕಲಾಗಿದೆ. ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚು ಮಾಡಲು ಕೇಂದ್ರ ಸರ್ಕಾರ ,ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸೂಚನೆ ನೀಡಿದೆ

ಬಾಕ್ಸ್
೧೧.೮೧ ಲಕ್ಷ ಮಂದಿಗೆ ಪರೀಕ್ಷೆ

ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ ಈ ನಡುವೆ ಸೋಂಕು ಪತ್ತೆ ಪರೀಕ್ಷೆ ಪ್ರಮಾಣವನ್ನು ಗಣನೀಯವಾಗಿ ಹೆಚ್ಚು ಮಾಡಲಾಗಿದೆ.
ನಿನ್ನೆ ೧೧,೮೧,೨೮೯ ಮಂದಿಗೆ ಪರೀಕ್ಷೆ ಮಾಡಲಾಗಿದ್ದು ಇಲ್ಲಿಯವರೆಗೆ ದೇಶದಲ್ಲಿ ೨೪,೦೯,೫೦,೮೪೨ ಮಂದಿಗೆ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ಬಾಕ್ಸ್

  • ಸೋಂಕು ಮತ್ತು ಸಾವು ಪ್ರಕರಣದಲ್ಲಿ ಈ ವರ್ಷದಲ್ಲಿ ದಾಖಲೆ
  • ೬೨,೭೧೪ ಮಂದಿಗೆ ಸೋಂಕು,೩೧೨ ಮಂದಿ ಸಾವು
  • ೧೬೩ ದಿನದ ಬಳಿಕ ದೇಶದಲ್ಲಿ ದಾಖಲೆ
  • ೫ ಲಕ್ಷ ಸನಿಹದಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ
  • ಮಹಾರಾಷ್ಟ್ರ ಕೇರಳ ಕರ್ನಾಟಕ ತಮಿಳುನಾಡು ಪಂಜಾಬ್ ಹರಿಯಾಣ ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತು ಸಕ್ರಿಯ ಪ್ರಕರಣ ಗಣನೀಯವಾಗಿ ಏರಿಕೆ
  • ಸೋಂಕು ಏರಿಕೆ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತಲೆನೋವು
  • ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಳ ಮಾಡುವಂತೆ ಸೂಚನೆ.
  • ದೇಶದಲ್ಲಿ ಈವರೆಗೆ ೨೪ ಕೋಟಿಗೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ಪತ್ತೆ ಪರೀಕ್ಷೆ