ಶವಸಂಸ್ಕಾರ ಮಾಡಲು ರುದ್ರಭೂಮಿಯ ಪರದಾಟ

ಸಂಜೆವಾಣಿ ವಾರ್ತೆ
ಕೊಪ್ಪಳ, ಸೆ.09: ಶವ ಸಂಸ್ಕಾರಕ್ಕೆ ರುದ್ರಭೂಮಿ ಇಲ್ಲದೆ ದಲಿತರ ಪರದಾಡಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿಯ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ದಲಿತರಿಗೆ ರುದ್ರಭೂಮಿ ಇಲ್ಲದ್ದಕ್ಕೆ ಹಳ್ಳದಲ್ಲಿ ಶವಸಂಸ್ಕಾರ ಮಾಡಲಾಗಿದೆ. ಅಷ್ಟೇ ಅಲ್ಲದೆ, ಶವಸಂಸ್ಕಾರಕ್ಕೆ ತೆರಳುವ ರಸ್ತೆ ಸಂಪೂರ್ಣ ಹಾಳಾದ ಹಿನ್ನೆಲೆ ರಸ್ತೆ ಗುಂಡಿಯಲ್ಲಿ ಟ್ರ್ಯಾಕ್ಟರ್ ಸಿಲುಕಿ ಜನರು ಪರದಾಡಿದ್ದಾರೆ. ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶವಸಂಸ್ಕಾರಕ್ಕೆ ರುದ್ರಭೂಮಿ ಇಲ್ಲದೆ ದಲಿತರು ಪರದಾಟ ನಡೆಸುತ್ತಿದ್ದಾರೆ. ಹಳ್ಳದಲ್ಲಿ ಶವಸಂಸ್ಕಾರ ಮಾಡುತ್ತಿದ್ದಾರೆ. ಹಲವಾರು ಸಲ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ಈ ವಿಚಾರ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದಲಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.