ಶಹಾಬಾದ:ಜ. 15 ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸಲು ಸಭೆ

ಕಲಬುರಗಿ.ಜ.13:ಶಹಾಬಾದ ತಾಲೂಕಿನ ಗ್ರಾಮ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸುವ ಕುರಿತು ಕಲಬುರಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇದೇ ಜನವರಿ 15 ರಂದು ಬೆಳಿಗ್ಗೆ 10 ಗಂಟೆಗೆ ಶಹಾಬಾದ ಗಂಗಮ್ಮಾ ಎಸ್. ಮರಗೋಳ ಕನ್ಯಾ ಪ್ರೌಢಶಾಲೆಯಲ್ಲಿ ಸಭೆ ಏರ್ಪಡಿಸಲಾಗಿದೆ ಎಂದು ಶಹಾಬಾದ ತಹಶೀಲ್ದಾರರಾದ ಸುರೇಶ ವರ್ಮಾ ಅವರು ತಿಳಿಸಿದ್ದಾರೆ.
ಶಹಾಬಾದ ತಾಲೂಕಿನ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತರಾದ ನೂತನ ಗ್ರಾಮ ಪಂಚಾಯಿತಿ ಸದಸ್ಯರು ಚುನಾವಣಾ ಅಧಿಕಾರಿಗಳು ನೀಡಲಾದ ಪ್ರಮಾಣಪತ್ರಗಳೊಂದಿಗೆ ನಿಗದಿಪಡಿಸಿದ ಸಮಯಕ್ಕಿಂತ 1 ಗಂಟೆ ಮುಂಚಿತವಗಿ ಆಯಾ ಗ್ರಾಮ ಪಂಚಾಯಿತಿಗೆ ನಿಗದಿಪಡಿಸಲಾದ ಸ್ಥಳದಲ್ಲಿ ಕೋವಿಡ್-19 ಸುರಕ್ಷತಾ ಸುರಕ್ಷತಾ ಕ್ರಮಗಳೊಂದಿಗೆ ಕುಳಿತುಕೊಳ್ಳಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆಯಲ್ಲಿ ಹಾಜರಿರಬೇಕೆಂದು ಅವರು ತಿಳಿಸಿದ್ದಾರೆ.