ಶಹಾಬಾದದಲ್ಲಿ ರಂಗೋಲಿ ಸ್ಪರ್ಧೆ ಹಾಗೂಜಾಥಾ ಮೂಲಕ ಮತದಾನ ಜಾಗೃತಿ

ಕಲಬುರಗಿ,ಏ.29:ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಶಹಾಬಾದ ನಗರದ ಬಸವೇಶ್ವರ ವೃತ್ತದಿಂದ ಸರ್ಕಾರಿ ಹಾಸ್ಟೇಲ್‍ವರೆಗೆ ರಂಗೋಲಿ ಸ್ಪರ್ಧೆ ಏರ್ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಮತದಾನದ ಕುರಿತು ಶನಿವಾರ ಜಾಗೃತಿ ಮೂಡಿಸಲಾಯಿತು.

ನಂತರ ಬಸವೇಶ್ವರ ವೃತ್ತದಿಂದ ತಾಲೂಕು ಪಂಚಾಯತಿವರೆಗೆ ಕಾಲ್ನಡಿಗೆ ಜಾಥಾವನ್ನು ಏರ್ಪಡಿಸಿ ಸಾರ್ವಜನಿಕರಲ್ಲಿ ಮತದಾನದ ಕುರಿತು ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಶಹಾಬಾದ ನಗರದ ಸುತ್ತಮುತ್ತಲಿನ ಎಲ್ಲಾ ಗ್ರಾಮ ಪಂಚಾಯತಿಗಳ ಸಾರ್ವಜನಿಕರು ಪಾಲ್ಗೊಂಡಿದ್ದರು.

    ಮತದಾರರರು ಮೇ 10ರಂದು ತಪ್ಪದೆ ಮತದಾನ ಮಾಡಬೇಕು. ಮತದಾನ ಮಾಡುವುದು ನಮ್ಮೆಲ್ಲರ ಹಕ್ಕಾಗಿದ್ದು, ನಾವು ಸ್ವ-ಇಚ್ಛೆಯಿಂದ ಮತದಾನ ಮಾಡಬೇಕು. ಇದೇ ಸಂದರ್ಭದಲ್ಲಿ ಮತದಾನದ ಮಹತ್ವವನ್ನು ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ.ಎಸ್. ರಾಠೋಡ, ಕಲಬುರಗಿ ಗ್ರಾಮೀಣ ಎಂ.ಸಿ.ಸಿ. ನೋಡಲ್ ಅಧಿಕಾರಿ ವೀರಣಾ ಕೌಲಗಿ ಹಾಗೂ ಶಹಾಬಾದ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಹಾಬಾದ ತಾಲೂಕು ಪಂಚಾಯತ್‍ನ ಸಹಾಯಕ ನಿರ್ದೇಶಕರು, ಶಹಾಬಾದ ತಾಲೂಕಿನ ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗಗಳು ಉಪಸ್ಥಿತರಿದ್ದರು.