ಶಾಂತಮ್ಮಗೆ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ

ಬೀದರ್: ಮಾ.9:ತಾಲ್ಲೂಕಿನ ಚಿಟ್ಟಾವಾಡಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶಾಂತಮ್ಮ ಅವರಿಗೆ ರಾಜ್ಯಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ದೊರೆತಿದೆ.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.