ಶಾಂತಲಾ ಸರ್ಕಲ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್

ಬೆಂಗಳೂರು, ನ.18-ಮೆಜೆಸ್ಟಿಕ್‌ನಲ್ಲಿರುವ ಶಾಂತಲಾ ಸರ್ಕಲ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ ಒಂದು ತಿಂಗಳು ಬಂದ್ ಆಗಲಿದೆ.
ವೈಟ್ ಟ್ಯಾಪಿಂಗ್ ಕಾಮಗಾರಿಯು ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ಸಂಚಾರ ಬಂದ್ ಆಗಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಯೋಜನೆ ಕೇಂದ್ರ-1 ವಿಭಾಗದ ವತಿಯಿಂದ ನಗರದ ಗುಬ್ಬಿ ತೋಟದಪ್ಪ ರಸ್ತೆಯನ್ನು ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ಸುಮಾರು 580 ಮೀಟರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ.
ಈ ಅವಧಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಆಗುವ ಅನಾನುಕೂಲವನ್ನು ತಪ್ಪಿಸಲು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಮನವಿ ಮಾಡಲಾಗಿದೆ.