ಶಾಂತಲಿಂಗೇಶ್ವರ ಪಲ್ಲಕ್ಕಿ ಮಹೋತ್ಸವ 15ಕ್ಕೆ

ಕಲಬುರಗಿ,ಸೆ.12-ಕಮಲಾಪುರದ ಸಮಸ್ತ ಭಕ್ತ ಮಂಡಳಿಯಿಂದ ಸೆ.15 ರಂದು ಕಮಲಾಪುರದ ಶಾಂತಲಿಂಗೇಶ್ವರ ಪುಣ್ಯಸ್ಮರಣೆ ಹಾಗೂ ಪಲ್ಲಕ್ಕಿ ಮಹೋತ್ಸವ ಜರುಗಲಿದೆ.
ಅಂದು ಬೆಳಗ್ಗೆ 9.30ಕ್ಕೆ ಮುತ್ತೈದೆಯರಿಂದ ಕುಂಭ ಕಳಸದೊಂದಿಗೆ ಶಾಂತಲಿಂಗೇಶ್ವರ ಗದ್ದುಗೆಗೆ ರುದ್ರಾಭಿಷೇಕ ಜರುಗಲಿದೆ. ನಂತರ ಬೆಳಗ್ಗೆ 11.30ಕ್ಕೆ ಶಾಂತವೀರ ದೇವರು ನೇತೃತ್ವದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ತದನಂತರ ಭಕ್ತರಿಗೆ ಪ್ರಸಾದ ಸೇವೆ ನಡೆಯಲಿದೆ. ಸಂಜೆ 5ಕ್ಕೆ ಶಾಂತಲಿಂಗೇಶ್ವರ ಪಲ್ಲಕ್ಕಿ ಮಹೋತ್ಸವ ನಡೆಯಲಿದೆ. ಹೀಗಾಗಿ ಭಕ್ತರು ಪಲ್ಲಕ್ಕಿ ಮಹೋತ್ಸವಕ್ಕೆ ಪಾಲ್ಗೊಳ್ಳಬೇಕು ಎಂದು ವಿಶ್ವರಾಧ್ಯ ಸೇವಾ ಸಮಿತಿ ಸಂಘಟನಾ ಕಾರ್ಯದರ್ಶಿ ಬಸವರಾಜ ಶೀಲವಂತ ತಿಳಿಸಿದ್ದಾರೆ.