ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವ ಭಾಗ: ರಾಗಾ

ನವದೆಹಲಿ, ಜ.೮- ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಆಂತರಿಕ ಭಾಗ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ದೇಶದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನ್ನದಾತರು ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸದಾ ಬೆಂಬಲ ನೀಡಲಿದೆ ಎಂದು ಪುನರುಚ್ಚರಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು ರೈತರ ಹೋರಾಟದಲ್ಲಿ ಪಕ್ಷದ ಧ್ವನಿಯು ಇರಲಿದೆ ಎಂದು ತಿಳಿಸಿದ್ದಾರೆ.

ಬೇಡಿಕೆಗಳ ಈಡೇರಿಕೆಗಾಗಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಜೊತೆಯಾಗಿ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ

ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಇನ್ ಪಡೆಯುವ ಮೂಲಕ ಅನ್ನದಾತರು ನಡೆಸುತ್ತಿರುವ ಹೋರಾಟವನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಅವರು ಹೇಳಿದ್ದಾರೆ.

ಗಡಿ ಬಂದ್:
ರೈತರ ಹೋರಾಟ ೪೪ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ದೆಹಲಿ ಸಂಪರ್ಕ ಕಲ್ಪಿಸುವ ಎಲ್ಲಾ ಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಸಿಂಗು, ತಿಕ್ರಿ, ಔಚಾಂಡಿ,ಪಿಯು, ಮನಿಯಾರಿ, ಸಾಬೋಲಿ, ಮಂಗೇಶ್ ಗಡಿಯನ್ನು ಮಿಚ್ಚಿ ರೈತರು ಆಕ್ರೋಶ ಹೊರ ಹಾಕಿದ್ದಾರೆ.