ಶಾಂತಿ ಸಭೆ

ಲಕ್ಷ್ಮೇಶ್ವರ, ಆ 5: ಮೊಹರಂ ಹಬ್ಬದ ಅಂಗವಾಗಿ ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಗುರುವಾರ ಶಾಂತಿ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಪಿಎಸ್‍ಐ ಡಿ. ಪ್ರಕಾಶ್ ಅವರು ಮಾತನಾಡಿ, ಪಟ್ಟಣ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿದ್ದು, ಹಬ್ಬ ಹರಿದಿನಗಳು ಸಂಸ್ಕೃತಿಯ ಸಂಕೇತಗಳಾಗಿವೆ. ಎಲ್ಲರೂ ಸ್ನೇಹ ಸೌಹಾರ್ದತೆಯಿಂದ ಬಾಳಿ ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಪೂರ್ಣಾಜಿ ಕರಾಟೆ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ಅನ್ವರ್ಸಾಬ ಹವಾಲ್ದಾರ, ಸುರೇಶ ನಂದಣ್ಣವರ, ಎಂ.ಎಂ. ಗದಗ, ನಜೀರ ಗದಗ, ಪ್ರಕಾಶ ಮಾದನೂರು, ಬಸವರಾಜ ಚಕ್ರಸಾಲಿ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.