ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಧಿಕಾ ಪ್ರಜ್ವಲ್ “ಶಾನುಬೋಗರ ಮಗಳು’ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. “ಶಾನುಭೋಗರ ಮಗಳ” ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ನಿರ್ದೇಶಕ ಕೋಡ್ಲು ರಾಮಕೃಷ್ಣ ಚಿತ್ರೀಕರಣ ಮಾಡಿದ್ದಾರೆ.
“ಶಾನುಭೋಗರ ಮಗಳು” ಚಿತ್ರ ಭಾಗ್ಯ ಕೆ ಮೂರ್ತಿ ಅವರ ಕಾದಂಬರಿ ಆಧಾರಿತ ಚಿತ್ರವಾಗಿದೆ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ.
ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, ರಮೇಶ್‍ಭಟ್, ಸುಧಾಬೆಳವಾಡಿ, ಪದ್ಮಾ ವಾಸಂತಿ, ವಾಣಿಶ್ರೀ, ಭಾಗ್ಯಶ್ರೀ, ಕುಮಾರಿ ಅನನ್ಯ, ಟಿ.ಎನ್. ಶ್ರೀನಿವಾಸ ಮೂರ್ತಿ, ನಿರಂಜನ ಶೆಟ್ಟಿ ಪ್ರಧಾನ ಪಾತ್ರದಲ್ಲಿದ್ದಾರೆ. ಶಮಿತಾ ಮಲ್ನಾಡ್ ಸಂಗೀತ, ಜೈ ಆನಂದ್ ಛಾಯಾಗ್ರಹಣವಿದೆ