
ದಾವಣಗೆರೆ.ಮೇ.16; ಹಿರಿಯ ರಾಜಕಾರಣಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಮುಖಂಡರು ಒತ್ತಾಯಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತುಜಿಲ್ಲಾಧ್ಯಕ್ಷರಾದ ದೇವರಮನೆ ಶಿವಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ವೀರಶೈವ ಲಿಂಗಾಯತ ಸಮಾಜದ ೩೯ ಮಂದಿ ಶಾಸಕರಾಗಿ ಚುನಾಯಿತರಾಗಿದ್ದಾರೆ ರಾಜ್ಯದಲ್ಲಿ ೨ ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ವೀರಶೈವ ಲಿಂಗಾಯತ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಸಿಎಂ ಸ್ಥಾನ ನೀಡಬೇಕು ಅಥವಾ ಎಂ.ಬಿ ಪಾಟೀಲ್,ಎಸ್ ಎಸ್ ಮಲ್ಲಿಕಾರ್ಜುನ ಹಾಗೂ ಈಶ್ವರ್ ಖಂಡ್ರೆ ಅವರಲ್ಲಿ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಸಮಾಜದ ೮ ರಿಂದ ೯ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಈ ಬಾರಿ ವೀರೇಶ್ವರ ಲಿಂಗಾಯತ ಸಮಾಜ ಬಾಂಧವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಆದ್ದರಿಂದ ಸಮಾಜದ ಶಾಸಕರಿಗೆ ಹೆಚ್ಚಿನ ಮಾನ್ಯತೆ ನೀಡಬೇಕೆಂದರು.ಸುದ್ದಿಗೋಷ್ಠಿಯಲ್ಲಿ ರಮೇಶ್ ಬಿ.ಜೆ,ಸಿದ್ದೇಶ್ ಕರೆಶಿವಪ್ಪಳ,ವಿಶ್ವನಾಥ್ ಬುಳ್ಳಾಪುರ,ಐಗೂರು ಚಂದ್ರಶೇಖರ್, ನಿರ್ಮಲಾ ಸುಭಾಷ್,ಕೊರಟಗೆರೆ ಶಿವಕುಮಾರ್ ಉಪಸ್ಥಿತರಿದ್ದರು