ಶಾಲಾ – ಅಂಗನವಾಡಿ ಕಟ್ಟಡಗಳ ದುರಸ್ತಿ ಕೈಗೊಳ್ಳಿ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೨೮; ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ತುರ್ತು ದುರಸ್ತಿ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ  ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆಯಾ ತಾಲೂಕುಗಳ ತಹಶೀಲ್ದಾರರು, ಮಳೆಯ ಸ್ಥಿತಿ ನೋಡಿಕೊಂಡು ಪರಿಹಾರ ಕಾರ್ಯಗಳನ್ನು ಸಮರ್ಥವಾಗಿ ಕೈಗೊಳ್ಳಬೇಕು. ಹಳೆಯ ಹಾಗೂ ದುಸ್ಥಿತಿಯಲ್ಲಿರುವ ಶಾಲಾ ಕಟ್ಟಡಗಳ ಮಾಹಿತಿ ಪಡೆದುಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮನೆ, ಜಾನುವಾರು, ಬೆಳೆ ಹಾಗೂ ಪ್ರಾಣಹಾನಿಯಾಗದಂತೆ ತಡೆಯಲು ಪ್ರಯತ್ನಿಸಬೇಕು ಎಂದು ಹೇಳಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ಡಿಡಿಪಿಐ ರವಿಶಂಕರ್ ರೆಡ್ಡಿ, ಡಿಡಿಪಿಯು ಎನ್.ರಾಜು, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.  
=========