ಶಾಲಾ ಅಭಿವೃದ್ಧಿಗೆ ಅನುದಾನಕ್ಕೆ ಆಗ್ರಹ

ಗಂಗಾವತಿ ಜ.02: ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಲೆಗಳ ಜೀರ್ಣೋದ್ಧಾರಕ್ಕಾಗಿ ಮತ್ತು ಅವುಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡುವಂತೆ ಶಾಸಕ ಪರಣ್ಣ ಮುನವಳ್ಳಿ ಬೆಂಗಳೂರನಲ್ಲಿ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್‍ರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಇದ್ದರು.