ಶಾಲಾ, ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಜಾಗೃತಿ

ಚಿತ್ರದುರ್ಗ,ಸೆ.9; ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಬಾಪೂಜಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ನಿಯಂತ್ರಣ ಜಾಗೃತಿ ಕಾರ್ಯಕ್ರಮವನ್ನು ನೀಡಲಾಯಿತು ಮತ್ತು ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡ ಹಿರಿಯೂರು ತಾಲ್ಲೂಕಿನ ನಗರ ಪ್ರದೇಶಗಳಲ್ಲಿ, ಕೆ.ಆರ್. ಪುರ ಮತ್ತು ಆದಿವಾಲ ಫಾರಂ ಹಳ್ಳಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಮಂಗಳವಾರ ದಾಳಿ ನಡೆಸಿ ಒಟ್ಟು 04 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಿದೆ.  
 ತಂಬಾಕು ಮತ್ತು ಕೊರೋನಾ ಕುರಿತು ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.
  ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 01 ಕೇಸುಗಳನ್ನು ದಾಖಲಿಸಿ ರೂ. 100 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 03 ಕೇಸುಗಳನ್ನು ದಾಖಲಿಸಿ ರೂ. 500 ದಂಡವನ್ನು  ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಸಮಾಜ ಕಾರ್ಯಕರ್ತ ಕೆ.ಎಂ. ತಿಪ್ಪೇಸ್ವಾಮಿ, ಮುಖ್ಯೋಪಾಧ್ಯೆ ಎಂ. ಮಂಜುಳಾ, ಆರೋಗ್ಯ ನಿರೀಕ್ಷಕ ಅಧಿಕಾರಿ ಜೆ. ರಂಗಸ್ವಾಮಿ, ಸಿಆರ್‍ಪಿ ಶಿಕ್ಷಕ ಕೋಟಿಲಿಂಗಯ್ಯ, ಪೊಲೀಸ್ ಇಲಾಖೆಯ ಅಜಿತ್ ಕುಮಾರ್, ಎಲ್. ಹಾಲೇಶ್, ಅಂಗನಾವಾಡಿ ಕಾರ್ಯಕರ್ತೆ ಶೋಭಾ ಇದ್ದರು.